×
Ad

ಕರಾವಳಿ ಜಿಲ್ಲೆಗಳಿಗೆ ಏಕ, ಬಹು ನಿವೇಶನ ವಿನ್ಯಾಸ ಅನುಮೋದನೆಗೆ ವಿಶೇಷ ಸೇವೆ: ಸಚಿವ ಬಿ.ಎಸ್.ಸುರೇಶ್

Update: 2025-12-09 12:42 IST

 ಸಚಿವ ಬೈರತಿ ಸುರೇಶ್

ಬೆಳಗಾವಿ: ರಾಜ್ಯದ ಇತರ ಜಿಲ್ಲೆಗಳಿಗಿಂತ ಕರಾವಳಿ ಜಿಲ್ಲೆಗಳು ಭೌಗೋಳಿಕವಾಗಿ ಭಿನ್ನವಾಗಿರುವುದರಿಂದ ಈ ಜಿಲ್ಲೆಗಳಿಗೆ ಅನ್ವಯವಾಗುವಂತೆ ಏಕ/ಬಹು ನಿವೇಶನ ವಿನ್ಯಾಸ ಅನುಮೋದನೆ ನೀಡುವ ಕುರಿತು ವಿಶೇಷ ಸೇವೆಗಳನ್ನು ಕಲ್ಪಿಸಲಾಗಿದೆ ಎಂದು ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವ ಬಿ. ಎಸ್. ಸುರೇಶ್ ತಿಳಿಸಿದ್ದಾರೆ.

ಅವರು ವಿಧಾನ ಪರಿಷತ್ ನಲ್ಲಿ ಸದಸ್ಯ ಮಂಜುನಾಥ ಭಂಡಾರಿಯವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ ಮಾತನಾಡುತ್ತಿದ್ದರು.

ಕರಾವಳಿ ಜಿಲ್ಲೆಗಳಲ್ಲಿ ಸ್ಥಳೀಯ ಯೋಜನಾ ಪ್ರದೇಶದ ವ್ಯಾಪ್ತಿಗೆ ಒಳಪಡದೇ ಇರುವ ಗ್ರಾಮ ಪಂಚಾಯತ್ ಗಳಲ್ಲಿನ ಒಂದು ಎಕರೆ ಒಳಗಿನ ತಾಂತ್ರಿಕ ಅನುಮೋದನೆ ನೀಡಲು ಸಹಾಯಕ ನಿರ್ದೇಶಕರ ಕಚೇರಿ ಹಾಗೂ ಹತ್ತಿರದ ಯೋಜನಾ ಪ್ರಾಧಿಕಾರಗಳ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯ ಅಧಿಕಾರಿಗಳಿಗೆ ಅಧಿಕಾರ ಪ್ರತ್ಯಾಯೋಜಿಸಿ, ತಾಲೂಕು ಪಂಚಾಯತ್ ಕಚೇರಿಯಲ್ಲೇ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯ ಅಧಿಕಾರಿಗಳು ಕಾರ್ಯ ನಿರ್ವಹಿಸಲು ಆದೇಶಿಸಲಾಗಿದೆ.

ಕರಾವಳಿ ಜಿಲ್ಲೆ ಒಳಗೊಂಡಂತೆ ಇಡೀ ರಾಜ್ಯಕ್ಕೆ ಅನ್ವಯವಾಗುವಂತೆ ಏಕ/ಬಹು ನಿವೇಶನ ವಿನ್ಯಾಸ ಅನುಮೋದನೆ ನೀಡುವ ಕುರಿತ ನಿಯಮಗಳನ್ನು ಸಮನ್ವಯಗೊಳಿಸಲು ಮತ್ತು ವಿನ್ಯಾಸ ಅನುಮೋದನೆಯನ್ನು ಪಾರದರ್ಶಕತೆ ಹಾಗೂ ಜನಸ್ನೇಹಿಯಾಗಿಸಲು ಅನುಕೂಲವಾಗುವಂತೆ ಸೆಂಟರ್ ಫಾರ್ ಇ ಗವರ್ನೆನ್ಸ್ ವತಿಯಿಂದ ಯುನಿಫೈಡ್ ಲ್ಯಾಂಡ್ ಮ್ಯಾನೇಜ್ಮೆಂಟ್ ಸಿಸ್ಟಮ್ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News