×
Ad

ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ : ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಅದ್ಧೂರಿ ಸ್ವಾಗತ

Update: 2024-04-23 16:35 IST

ಬೆಳಗಾವಿ: ಹೊಸ ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿ ಕಂಬಕ್ಕೆ ಕಟ್ಟಿ ಹಲ್ಲೆಗೈದಿದ್ದ ಪ್ರಕರಣದ ಆರೋಪಿಗಳಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದ್ದು, ಜೈಲಿನಿಂದ ಹೊರಬಂದ ಆರೋಪಿಗಳನ್ನು ಅದ್ಧೂರಿಯಾಗಿ ಸ್ವಾಗತಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಬೆಳಗಾವಿಯ ಹಿಂಡಲಗಾ ಜೈಲಿನಿಂದ ಹೊರ ಬಂದ ಆರೋಪಿ ಬಸಪ್ಪ ನಾಯ್ಕ್‌ಗೆ  ಹೂಮಾಲೆ ಹಾಕಿ, ಸಿಹಿ ತಿನಿಸಿದ ಬಂಧು-ಮಿತ್ರರು ಸ್ವಾಗತ ಮಾಡಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.

ಏನಿದು ಘಟನೆ: ಹೊಸ ವಂಟಮೂರಿ ಗ್ರಾಮದಲ್ಲಿ ಪ್ರೀತಿಯ ವಿಚಾರವಾಗಿ ಮಹಿಳೆಯನ್ನು ವಿವಸ್ತ್ರಗೊಳಿಸಿ, ಮೆರವಣಿಗೆ ಮಾಡಿ ಬಳಿಕ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನೆಡಸಿದ ಘಟನೆ 2023ರ ಡಿಸೆಂಬರ್ ನಲ್ಲಿ  ನಡೆದಿತ್ತು. ಈ ಪ್ರಕರಣ ಸಂಬಂಧ 13 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.

ಇದೀಗ ಹೈಕೋರ್ಟ್ ಈ ಎಲ್ಲ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ನೀಡಿದ್ದು, ಆರೋಪಿಗಳು ಸೋಮವಾರ (ಏ.22) ರಾತ್ರಿ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News