ಕಂಪ್ಲಿ | ಅಬ್ದುಲ್ ಕಲಾಂ ಅವರ ಜೀವನವು ದೇಶದ ಪ್ರತಿಯೊಬ್ಬ ನಾಗರಿಕರಿಗೂ ಸ್ಪೂರ್ತಿ : ಬಡಿಗೇರ ಜಿಲಾನಸಾಬ್
ಕಂಪ್ಲಿ: ಮಾಜಿ ರಾಷ್ಟ್ರಪತಿ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಅವರು ಭಾರತಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಅವರ ಜೀವನವು ದೇಶದ ಪ್ರತಿಯೊಬ್ಬ ನಾಗರಿಕರಿಗೂ ಸ್ಪೂರ್ತಿದಾಯಕವಾಗಿದೆ ಎಂದು ಡಾ.ಎಪಿಜೆ ಅಬ್ದುಲ್ ಕಲಾಂ ಟ್ರಸ್ಟ್ ಸಂಚಾಲಕ ಬಡಿಗೇರ್ ಜಿಲಾನಸಾಬ್ ಹೇಳಿದರು.
ಕಂಪ್ಲಿ-ಕೋಟೆಯ ಸ್ವಾಮಿ ವಿವೇಕಾನಂದ ಶಾಲೆಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಅಬ್ದುಲ್ ಕಲಾಂ ರವರ 94ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ಶಿಕ್ಷಣ, ವಿಜ್ಞಾನ, ಬಾಹ್ಯಾಕಾಶ ಹಾಗೂ ತಂತ್ರಜ್ಞಾನ ಕ್ಷೇತ್ರಕ್ಕೆ ಬಹಳಷ್ಟು ಕೊಡುಗೆಯನ್ನು ನೀಡಿದ್ದಾರೆ. ಆದ್ದರಿಂದ ಕ್ಷಿಪಣಿ ಪಿತಾಮಹ ಎಂದು ಪ್ರಸಿದ್ಧಿ ಪಡೆದಿದ್ದಾರೆ ಎಂದು ತಿಳಿಸಿದರು.
ಟ್ರಸ್ಟ್ ಉಪಾಧ್ಯಕ್ಷ ಎ.ಎಸ್.ಯಲ್ಲಪ್ಪ ಮಾತನಾಡಿದರು.
ಕಾರ್ಯಕ್ರಮ ಆರಂಭದಲ್ಲಿ ಅಬ್ದುಲ್ ಕಲಾಂ ಜೀ ಅವರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ, ಪುಷ್ಪ ನಮನದೊಂದಿಗೆ ಗೌರವ ಸಲ್ಲಿಸಿದರು.
ಜಯಂತಿ ಅಂಗವಾಗಿ ಏರ್ಪಡಿಸಿದ್ದ ಭಾಷಣ ಹಾಗೂ ಚಿತ್ರಕಲೆ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಶಿಕ್ಷಕಿಯರಾದ ಕಂಬತ್ ಶ್ವೇತಾ, ವರ್ಷಾ ಮಂಜುಮದರ್, ಆರ್.ಕೆ. ಮುಸ್ಕಾನ್, ಕೊಲ್ಕಾರ ಉಮಾ, ಜೆ.ಅಕ್ಷತಾ, ನಂದಿನಿ, ಗೌಸಿಯಾ, ಮಠದ ಸುನೀತಾ, ಕಂಬತ್ ಕಾವ್ಯಾ ಸೇರಿದಂತೆ ವಿದ್ಯಾರ್ಥಿಗಳು ಪಾಲಕ ಪೋಷಕರು ಉಪಸ್ಥಿತರಿದ್ದರು.