×
Ad

ನ.8 ರಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಬಳ್ಳಾರಿ ಜಿಲ್ಲಾ ಪ್ರವಾಸ

Update: 2025-11-06 19:49 IST

ಸಚಿವ ಚಲುವರಾಯಸ್ವಾಮಿ

ಬಳ್ಳಾರಿ : ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು ನವೆಂಬರ್ 8 ರಂದು ಬಳ್ಳಾರಿಗೆ ಆಗಮಿಸಲಿದ್ದಾರೆ.

ಅಂದು ಬೆಳಿಗ್ಗೆ 9 ಗಂಟೆಗೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ 10 ಗಂಟೆಗೆ ತೋರಣಗಲ್ಲಿನ ಜಿಂದಾಲ್ ಏರ್‌ಸ್ಟಿಪ್ ಗೆ ಆಗಮಿಸುವರು.

ಅಲ್ಲಿಂದ ಬೆಳಿಗ್ಗೆ 10.15ಕ್ಕೆ ಹೊರಟು, ಬೆಳಿಗ್ಗೆ 11 ಗಂಟೆಗೆ ಕೃಷಿ ಇಲಾಖೆ ವತಿಯಿಂದ ಬಳ್ಳಾರಿ ನಗರದ ಹಳೆಯ ತಾಲ್ಲೂಕು ಕಚೇರಿಯ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಕೃಷಿಕ ಸಮಾಜ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಬಳಿಕ ಮಧ್ಯಾಹ್ನ 12 ಗಂಟೆಗೆ ಬಳ್ಳಾರಿಯಿಂದ ತೋರಣಗಲ್ಲಿನ ಜಿಂದಾಲ್ ಏರ್‌ಸ್ಟಿಪ್ ಗೆ ಆಗಮಿಸಿ, ನಂತರ ಮಧ್ಯಾಹ್ನ 1 ಗಂಟೆಗೆ ವಿಶೇಷ ವಿಮಾನದ ಮೂಲಕ ಕಲಬುರಗಿ ಜಿಲ್ಲೆಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News