×
Ad

ಬಳ್ಳಾರಿ | ತಪ್ಪಿಸಿಕೊಳ್ಳಲು ಯತ್ನಿಸಿದ ಪೋಕ್ಸೋ ಪ್ರಕರಣದ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು

Update: 2025-01-16 19:28 IST

ಸಾಂದರ್ಭಿಕ ಚಿತ್ರ | PC : ANI

ಬಳ್ಳಾರಿ: ಪಂಚನಾಮೆ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ‘ಪೋಕ್ಸೋ’ ಪ್ರಕರಣದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ.

ಇತ್ತೀಚೆಗೆ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪ ಪ್ರಕರಣ ಸಂಬಂಧ ಮಂಜುನಾಥ್ ಎಂಬಾತ ತಲೆಮರೆಸಿಕೊಂಡಿದ್ದನು. ಈ ಸಂಬಂಧ ಕಾರ್ಯಾಚರಣೆ ಕೈಗೊಂಡ ಪೊಲೀಸರು ಬುಧವಾರ ರಾತ್ರಿ ತೋರಣಗಲ್ಲಿನಲ್ಲಿ ಬಂಧಿಸಿದ್ದರು.

ಗುರುವಾರ ಬೆಳಗ್ಗೆ ಆರೋಪಿಯನ್ನು ಪಂಚನಾಮೆಗೆ ಕರೆದೊಯ್ಯಲಾಗಿತ್ತು. ಈ ವೇಳೆ ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದ್ದನು. ಆಗ ಸಿಬ್ಬಂದಿ ಆರೋಪಿ ಕಾಲಿಗೆ ಗುಂಡೇಟು ಹೊಡೆದು ವಶಕ್ಕೆ ಪಡೆದಿದ್ದಾರೆ. ಸದ್ಯ ಗಾಯಗೊಂಡಿರುವ ಆರೋಪಿಯನ್ನು ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಗೆ (ವಿಮ್ಸ್) ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News