ಬಳ್ಳಾರಿ | ಕಾರು-ಟಿಪ್ಪರ್ ನಡುವೆ ಭೀಕರ ರಸ್ತೆ ಅಪಘಾತ: ನಾಲ್ವರು ಮೃತ್ಯು
Update: 2025-05-26 15:14 IST
ಬಳ್ಳಾರಿ : ಕಾರು ಮತ್ತು ಟಿಪ್ಪರ್ ಲಾರಿ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಜೈಸಿಂಗಪೂರ ಗ್ರಾಮದ ಬಳಿ ನಡೆದಿರುವುದಾಗಿ ವರದಿಯಾಗಿದೆ.
ಸ್ವಾತಿ(5), ಬಿಂಧುಶ್ರೀ(4), ಆಶಾ(28) ಮತ್ತು ಜಯಲಕ್ಷ್ಮೀ(21) ಮೃತರು ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಸಂಡೂರು ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.