×
Ad

ಬಳ್ಳಾರಿ ಬ್ಯಾನರ್ ಗಲಾಟೆ: ಸಾರ್ವಜನಿಕರು ಘಟನೆಯ ದೃಶ್ಯಾವಳಿಗಳಿದ್ದಲ್ಲಿ ಪೊಲೀಸ್ ಠಾಣೆಗೆ ಮಾಹಿತಿ ನೀಡಲು ಮನವಿ

Update: 2026-01-05 20:27 IST

ಬಳ್ಳಾರಿ:  ನಗರದ ಸಿರುಗುಪ್ಪ ರಸ್ತೆಯ ಶಾಸಕ ಜನಾರ್ಧನ ರೆಡ್ಡಿ ಅವರ ಮನೆಯ ಮುಂದೆ ಜ.01 ರಂದು ಬ್ಯಾನರ್ ಹರಿದ ವಿಚಾರವಾಗಿ ನಡೆದ ಗಲಾಟೆಯ ಕುರಿತು ರೆಕಾರ್ಡ್ ಮಾಡಿದ ದೃಶ್ಯಾವಳಿಗಳು ಇದ್ದಲ್ಲಿ ಸಾರ್ವಜನಿಕರು ಹೆಚ್ಚಿನ ತನಿಖೆಗಾಗಿ ಬ್ರೂಸ್‌ಪೇಟೆ ಪೊಲೀಸ್ ಠಾಣೆಗೆ ಮಾಹಿತಿ ನೀಡಬಹುದು ಎಂದು ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಮನವಿ ಮಾಡಿದ್ದಾರೆ.

ನಗರದಲ್ಲಿ ಜ.01 ರಂದು ರಾತ್ರಿ 09 ಗಂಟೆಯಿಂದ 9.20 ಗಂಟೆಯ ಮಧ್ಯದ ಅವಧಿಯಲ್ಲಿ ಸಿರುಗುಪ್ಪ ರಸ್ತೆಯ ಹವಂಭಾವಿಯ ಜನಾರ್ಧನ ರೆಡ್ಡಿ ಅವರ ಜಾಗದ ಮುಂದೆ ಸಾರ್ವಜನಿಕರ ರಸ್ತೆಯಲ್ಲಿ ಹಾಕಿದ್ದ ಬ್ಯಾನರ್ ಹರಿದ ವಿಚಾರಕ್ಕೆ ಸಂಬಂಧಿಸಿದಂತೆ ರಸ್ತೆಯಲ್ಲಿ ಗಲಾಟೆ ಆಗಿ ರಾಜಶೇಖರ್ ರೆಡ್ಡಿ ಎಂಬವರು ಮೃತಪಟ್ಟಿದ್ದು, ಇದಕ್ಕೆ ಸಂಬಂಧಿಸಿದಂತೆ ಬ್ರೂಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ಸಂಖ್ಯೆ 01/2026 ಕಲಂ 103(1), 54, 352, 351(2) ಆಧಾರ 190 ಬಿ.ಎನ್.ಎಸ್-2023 ಹಾಗೂ ಕಲಂ 27 ಆರ್ಮ್ಸ್ ಆಕ್ಟ್-1959 ರಡಿ ಪ್ರಕರಣ ದಾಖಲಾಗಿರುತ್ತದೆ.

ಹಾಗಾಗಿ ಸಾರ್ವಜನಿಕರು ತಮ್ಮ ಮೊಬೈಲ್ ಹಾಗೂ ಇತರೆ ಎಲೆಕ್ಟ್ರಾನಿಕ್ ಸಾಧನಗಳಲ್ಲಿ ರೆಕಾರ್ಡಿಂಗ್ ಮಾಡಿದ್ದ ದೃಶ್ಯಾವಳಿಗಳು ಇದ್ದರೆ ಹೆಚ್ಚಿನ ತನಿಖೆಗಾಗಿ ಬ್ರೂಸ್ ಪೇಟೆ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ವ್ಯಾಟ್ಸಪ್ ಸಂಖ್ಯೆ 9480803045 ನಂಬರ್‌ಗೆ ಕಳಿಸಬಹುದು ಅಥವಾ ಖುದ್ದಾಗಿ ಠಾಣೆಗೆ ಹಾಜರಾಗಿ ಮಾಹಿತಿ ನೀಡಬಹುದು ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News