×
Ad

BALLARI | ಕಾರು ಅಪಘಾತ: ತಮಿಳುನಾಡಿನ ದೇವಸ್ಥಾನಕ್ಕೆ ತೆರಳಿ ವಾಪಸ್ಸಾಗುತ್ತಿದ್ದ ಮೂವರು ಮೃತ್ಯು

Update: 2025-12-24 10:35 IST

ಬಳ್ಳಾರಿ: ಕಾರೊಂದು ಅಪಘಾತಕ್ಕೀಡಾಗಿ ಮೂವರು ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ತೆಕ್ಕಲಕೋಟೆ ಪಟ್ಟಣದ 20ನೇ ವಾರ್ಡಿನ ದೇವಿನಗರ ಬಳಿ ರಾಷ್ಟ್ರೀಯ ಹೆದ್ದಾರಿ 150ಎನಲ್ಲಿ ಇಂದು ಮುಂಜಾನೆ ಸಂಭವಿಸಿದೆ.

ನಿಟ್ಟೂರಿನ ಪ್ರಸಾದ್ ರಾವ್ (75) ಸಿರುಗುಪ್ಪ ನಿವಾಸಿಗಳಾದ ವಿಜಯ (70) ಮತ್ತು ಸಂಧ್ಯಾ (35) ಮೃತಪಟ್ಟವರು ಎಂದು ತಿಳಿದುಬಂದಿದೆ.

ಗಂಭೀರ ಗಾಯಗೊಂಡಿರುವ ನಿಟ್ಟೂರು ಗ್ರಾಮದ ಪದ್ಮ (70) ಹಾಗೂ ಸಿರುಗುಪ್ಪದ ಬ್ರಹೇಶ್ವರ ರಾವ್ (45) ಎಂಬವರನ್ನು ಬಳ್ಳಾರಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೂಲತಃ ನಿಟ್ಟೂರು ಗ್ರಾಮದವರಾದ, ಸದ್ಯ ಸಿರುಗುಪ್ಪ ನಗರದಲ್ಲಿ ವಾಸವಿರುವ ಒಂದೇ ಕುಟುಂಬದ ಐವರು ತಮಿಳುನಾಡಿನ ದೇವಸ್ಥಾನಕ್ಕೆ ತೆರಳಿ ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಇವರು ಸಂಚರಿಸುತ್ತಿದ್ದ ಕಾರು ದೇವಿನಗರದ ಬಳಿ ತಲುಪಿದಾಗ ದಟ್ಟ ಮಂಜು ಕಾರಣ ಸರಿಯಾಗಿ ರಸ್ತೆ ಗೋಚರಿಸದೆ ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ ಎಂದು ಹೇಳಲಾಗಿದೆ.

ತೆಕ್ಕಲಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News