Ballari | ಡಾ.ಫ.ಗು.ಹಳಕಟ್ಟಿ ಜಯಂತಿ, ವಚನ ಸಂರಕ್ಷಣಾ ದಿನಾಚರಣೆ
ಸಂಡೂರು/ಬಳ್ಳಾರಿ: ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್ ಅನಿಲ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಗುರುವಾರ ವಚನ ಪಿತಾಮಹ ಡಾ. ಫ.ಗು. (ಫಕೀರಪ್ಪ ಗುರುಬಸಪ್ಪ) ಹಳಕಟ್ಟಿ ಅವರ ಜನ್ಮದಿನ ಹಾಗೂ ವಚನ ಸಾಹಿತ್ಯ ಸಂರಕ್ಷಣಾ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಡಾ. ಫ.ಗು. ಹಳಕಟ್ಟಿ ಅವರ ವಚನ ಸಾಹಿತ್ಯ ಸಂರಕ್ಷಣೆ, ಸಂಗ್ರಹ ಹಾಗೂ ಕನ್ನಡ ಸಾಹಿತ್ಯಕ್ಕೆ ನೀಡಿದ ಅಪಾರ ಕೊಡುಗೆಯನ್ನು ಸ್ಮರಿಸಲಾಯಿತು. ವಚನ ಸಾಹಿತ್ಯವು ಸಮಾನತೆ, ಮಾನವೀಯತೆ ಹಾಗೂ ಮೌಲ್ಯಯುತ ಬದುಕಿನ ಸಂದೇಶ ಸಾರುವ ಅಮೂಲ್ಯ ಪರಂಪರೆಯಾಗಿದ್ದು, ಅದನ್ನು ಮುಂದಿನ ಪೀಳಿಗೆಗೆ ಪರಿಚಯಿಸಿ ಸಂರಕ್ಷಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಲಾಯಿತು.
ಕಾರ್ಯಕ್ರಮದಲ್ಲಿ ಶಿರಸ್ತೇದಾರ್ ಸಿದ್ದಲಿಂಗಯ್ಯ ಸ್ವಾಮಿ, ಗ್ರೇಡ್–2 ತಹಶೀಲ್ದಾರ್ ಸುಧಾ ಸೇರಿದಂತೆ ತಾಲೂಕು ಕಚೇರಿಯ ವಿವಿಧ ವಿಭಾಗಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಡಾ. ಫ.ಗು. ಹಳಕಟ್ಟಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಅರ್ಪಿಸಿದರು.