Ballari | ಸಮಾಜಮುಖಿ ಕಾರ್ಯಗಳ ಮೂಲಕ ಮಾಜಿ ಶಾಸಕ ಟಿ.ಎಚ್.ಸುರೇಶ್‌ಬಾಬು ಜನ್ಮದಿನ ಆಚರಣೆ

Update: 2026-08-06 20:01 IST

ಬಳ್ಳಾರಿ/ಕಂಪ್ಲಿ: ಕಂಪ್ಲಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಟಿ.ಎಚ್. ಸುರೇಶ್‌ಬಾಬು ಅವರ 44ನೇ ಜನ್ಮದಿನದ ಅಂಗವಾಗಿ ಬಿಜೆಪಿ ಮಂಡಲ, ಬಿಜೆಪಿ ಮಹಿಳಾ ಘಟಕ ಹಾಗೂ ಮಹಾಶಕ್ತಿ ಕೇಂದ್ರದ ನೇತೃತ್ವದಲ್ಲಿ ಗುರುವಾರ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ಪಟ್ಟಣದ ಪೇಟೆ ಬಸವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಬಿಜೆಪಿ ಕಾರ್ಯಕರ್ತರು ರೋಗಿಗಳಿಗೆ ಹಾಲು, ಹಣ್ಣು ಹಾಗೂ ಬ್ರೆಡ್ ವಿತರಿಸಿದರು.

ನಂತರ ಐತಿಹಾಸಿಕ ಪ್ರಭುಸ್ವಾಮಿಗಳವರ ಪ್ರೌಢಶಾಲೆ (ಕಲ್ಮಠ ಶಾಲೆ) ಆವರಣದಲ್ಲಿ ಸಸಿ ನೆಟ್ಟು ಪರಿಸರ ಸಂರಕ್ಷಣೆಯ ಸಂದೇಶ ಸಾರಿದರು. ಅಲ್ಲದೆ ಪಟ್ಟಣದ 4ನೇ ವಾರ್ಡ್‌ನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪುಸ್ತಕ, ಲೇಖನ ಸಾಮಗ್ರಿಗಳು ಹಾಗೂ ಸಿಹಿ ವಿತರಿಸಿ ಸಮಾಜಮುಖಿ ಸೇವೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಕ್ಷೇತ್ರಾಧ್ಯಕ್ಷ ಸಿ.ಡಿ. ಮಹಾದೇವ, ಮಾಜಿ ಶಾಸಕ ಟಿ.ಎಚ್. ಸುರೇಶ್‌ಬಾಬು ಅವರು ಆರಂಭದಿಂದಲೂ ಸಮಾಜಮುಖಿ ಕಾರ್ಯಗಳಿಗೆ ಆದ್ಯತೆ ನೀಡುತ್ತಾ ಬಂದಿದ್ದಾರೆ. ಅವರ ಜನ್ಮದಿನವನ್ನು ಆಡಂಬರದಿಂದ ಆಚರಿಸುವ ಬದಲು ಸಮಾಜಕ್ಕೆ ಉಪಯುಕ್ತವಾಗುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಗಿದೆ ಎಂದು ಹೇಳಿದರು.

ಈ ವೇಳೆ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಅಳ್ಳಳ್ಳಿ ವೀರೇಶ್, ಸುದರ್ಶನ್ ರೆಡ್ಡಿ ಸೇರಿದಂತೆ ಹಲವು ಮುಖಂಡರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್, ಮಂಡಲ ಉಪಾಧ್ಯಕ್ಷ ಟಿ. ರಾಜಶೇಖರ್, ಪುರಸಭೆ ಮಾಜಿ ಸದಸ್ಯ ಡಾ. ವಿ.ಎಲ್. ಬಾಬು, ಎಸ್.ಎಂ. ನಾಗರಾಜಸ್ವಾಮಿ, ಕೆ. ಹೊನ್ನೂರಸಾಬ್, ಮುರಳಿ ಮೋಹನರೆಡ್ಡಿ, ಕಟ್ಟೆ ವಿಶ್ವನಾಥ್, ಬಿ. ದೇವೇಂದ್ರ, ಕೆ. ಮಹೇಶ್, ಸಿ.ಎ. ಚೆನ್ನಪ್ಪ, ಈರಣ್ಣ, ಬುಜ್ಜಿಕುಮಾರ, ವಿರುಪಾಕ್ಷಿ, ಮಹಿಳಾ ಮೋರ್ಚಾದ ಮಂಜುಳಾ, ಲಲಿತಮ್ಮ ಸೇರಿದಂತೆ ಬಿಜೆಪಿ ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News