ಕಂಪ್ಲಿ : ಪಟ್ಟಣದ 15ನೇ ವಾರ್ಡಿನ ಛಲವಾದಿ ಸಮಾಜದ ಹಿರಿಯ ಮುಖಂಡ ಹಾಗೂ ಪುರಸಭೆಯ ಮಾಜಿ ಸದಸ್ಯ ಎಂ.ಸಿ. ಮಾಯಪ್ಪ (78) ಅವರು ಅನಾರೋಗ್ಯದಿಂದ ಬುಧವಾರ ನಿಧನರಾದರು.

ಮೃತರು ಇಬ್ಬರು ಪುತ್ರರು, ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಅವರ ಅಂತ್ಯಕ್ರಿಯೆ ಗುರುವಾರ ಪಟ್ಟಣದ ಸಣಾಪುರ ರಸ್ತೆಯ ರುದ್ರಭೂಮಿಯಲ್ಲಿ ನಡೆಯಲಿದೆ.

ಕಂಪ್ಲಿ ಪುರಸಭೆಯ ಮಾಜಿ ಸದಸ್ಯರಾಗಿ ಸಾರ್ವಜನಿಕ ಸೇವೆ ಸಲ್ಲಿಸಿದ್ದ ಮಾಯಪ್ಪ ಅವರು, ಛಲವಾದಿ ಮಹಾಸಭಾದ ರಾಜ್ಯ ಮುಖ್ಯಸ್ಥರಾಗಿಯೂ ಜವಾಬ್ದಾರಿ ನಿರ್ವಹಿಸಿದ್ದರು. ಅಲ್ಲದೆ, ವಿವಿಧ ಸಾಮಾಜಿಕ, ಧಾರ್ಮಿಕ ಹಾಗೂ ಪ್ರಗತಿಪರ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಸಮಾಜದ ಶ್ರೇಯೋಭಿವೃದ್ಧಿ ಹಾಗೂ ಶೋಷಿತ ವರ್ಗಗಳ ಹಕ್ಕುಗಳಿಗಾಗಿ ನಿರಂತರವಾಗಿ ಶ್ರಮಿಸಿದ್ದರು.

ಅವರ ನಿಧನಕ್ಕೆ ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾದ ಪದಾಧಿಕಾರಿಗಳು, ಸಮಾಜದ ಮುಖಂಡರು ಹಾಗೂ ಗಣ್ಯರು ತೀವ್ರ ಸಂತಾಪ ಸೂಚಿಸಿ, ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor