×
Ad

Ballari | ಕುರುಗೋಡು ಪುರಸಭೆ ಅಧ್ಯಕ್ಷರಾಗಿ ಜಿ.ಮಂಜುನಾಥ್, ಉಪಾಧ್ಯಕ್ಷೆಯಾಗಿ ನಾಗವೇಣಿ ಅವಿರೋಧ ಆಯ್ಕೆ

Update: 2026-05-16 19:18 IST

ಬಳ್ಳಾರಿ / ಕುರುಗೋಡು: ಪಟ್ಟಣದ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಜಿ. ಮಂಜುನಾಥ್ ಹಾಗೂ ಉಪಾಧ್ಯಕ್ಷೆ ಸ್ಥಾನಕ್ಕೆ ನಾಗವೇಣಿ ಶುಕ್ರವಾರ ಅವಿರೋಧವಾಗಿ ಆಯ್ಕೆಯಾದರು.

ಪಟ್ಟಣದ ಪುರಸಭೆ ಕಚೇರಿಯಲ್ಲಿ ನರಸಪ್ಪ ಅವರ ನೇತೃತ್ವದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಆಯ್ಕೆ ನಡೆಯಿತು.

ಪರಿಶಿಷ್ಟ ಜಾತಿ ಪುರುಷರಿಗೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಪುರಸಭೆಯ 1ನೇ ವಾರ್ಡ್ ಸದಸ್ಯ ಜಿ. ಮಂಜುನಾಥ್ ಹಾಗೂ ಸಾಮಾನ್ಯ ಮಹಿಳೆಗೆ ಮೀಸಲಾದ ಉಪಾಧ್ಯಕ್ಷೆ ಸ್ಥಾನಕ್ಕೆ 18ನೇ ವಾರ್ಡ್ ಸದಸ್ಯೆ ನಾಗವೇಣಿ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಎರಡೂ ಸ್ಥಾನಗಳಿಗೆ ತಲಾ ಒಂದೇ ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಅವಿರೋಧ ಆಯ್ಕೆ ಘೋಷಿಸಲಾಯಿತು.

ಚುನಾವಣಾಧಿಕಾರಿಗಳು ನಾಮಪತ್ರಗಳ ಪರಿಶೀಲನೆ ನಡೆಸಿ ಅಂತಿಮವಾಗಿ ಇಬ್ಬರ ಆಯ್ಕೆಯನ್ನು ಘೋಷಿಸಿದರು. ಕುರುಗೋಡು ಪುರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷೆಯಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ವಿಜಯೋತ್ಸವ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಜೆ.ಎನ್. ಗಣೇಶ್, ಪುರಸಭೆ ಮುಖ್ಯಾಧಿಕಾರಿ ದತ್ತಾತ್ರೇಯ ಹೆಗಡೆ, ಪುರಸಭೆ ಸದಸ್ಯರು, ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News