×
Ad

Ballari | ಕಂಪ್ಲಿ ತಾಲೂಕಿನಲ್ಲಿ ಭಾರಿ ಗಾಳಿ-ಮಳೆ : ಧರೆಗುರುಳಿದ ವಿದ್ಯುತ್ ಕಂಬಗಳು

Update: 2026-05-16 19:38 IST

ಬಳ್ಳಾರಿ / ಕಂಪ್ಲಿ: ತಾಲ್ಲೂಕಿನಲ್ಲಿ ಬೀಸಿದ ಭಾರಿ ಗಾಳಿ, ಗುಡುಗು-ಸಿಡಿಲು ಸಹಿತ ಮಳೆಗೆ ಆರಕ್ಕೂ ಅಧಿಕ ವಿದ್ಯುತ್ ಕಂಬಗಳು ಧರೆಗುರುಳಿದ ಘಟನೆ ನಡೆದಿದೆ.

ಕಳೆದ ಹಲವು ದಿನಗಳಿಂದ ಸುಮಾರು 40 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶದ ಬಿಸಿಲಿನಿಂದ ಬಳಲುತ್ತಿದ್ದ ಜನತೆಗೆ ಮಳೆ ಕೊಂಚ ತಂಪು ತಂದಿದ್ದರೂ, ಉಷ್ಣಾಂಶದ ತಾಪಮಾನ ಇನ್ನೂ ಹೆಚ್ಚಾಗಿದೆ.

ದಿಢೀರ್ ಭಾರಿ ಗಾಳಿ-ಮಳೆಯಿಂದ ವಿದ್ಯುತ್ ಕಡಿತಗೊಂಡು ಜನಜೀವನ ಅಸ್ತವ್ಯಸ್ತವಾಯಿತು. ತಾಲ್ಲೂಕಿನ ಮೆಟ್ರಿ, ನಂ.2 ಮುದ್ದಾಪುರ ಹಾಗೂ ಇಟಗಿ ಗ್ರಾಮಗಳಲ್ಲಿ ಆರಕ್ಕೂ ಅಧಿಕ ವಿದ್ಯುತ್ ಕಂಬಗಳು ಧರೆಗುರುಳಿವೆ ಎಂದು ಶ್ರೀನಿವಾಸ ಪ್ರಸಾದ್ ತಿಳಿಸಿದ್ದಾರೆ.

ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ. ಬಿದ್ದಿರುವ ವಿದ್ಯುತ್ ಕಂಬಗಳನ್ನು ಬದಲಾಯಿಸುವ ಕಾರ್ಯ ಭರದಿಂದ ಸಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ಭಾರಿ ಮಳೆ, ಗಾಳಿ, ಸಿಡಿಲು ಹಾಗೂ ಗುಡುಗು ಸಂದರ್ಭಗಳಲ್ಲಿ ರೈತರು ಮತ್ತು ಸಾರ್ವಜನಿಕರು ಪಂಪ್‌ಸೆಟ್‌ಗಳನ್ನು ಆನ್ ಅಥವಾ ಆಫ್ ಮಾಡಬಾರದು. ವಿದ್ಯುತ್ ಪರಿವರ್ತಕಗಳ ಬಳಿ ನಿಲ್ಲುವುದನ್ನೂ ತಪ್ಪಿಸಬೇಕು ಎಂದು ಮನವಿ ಮಾಡಿದರು.

ಕಳೆದ ರಾತ್ರಿ 4.2 ಮಿ.ಮೀ ಮಳೆಯಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಜೂಗಲ್ ಮಂಜುನಾಯಕ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News