Ballari | ಸಂಡೂರು ತಾಲ್ಲೂಕು ಪಂಚಾಯಿತಿಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Update: 2026-08-15 18:31 IST

ಸಂಡೂರು/ಬಳ್ಳಾರಿ: ಸಂಡೂರು ತಾಲ್ಲೂಕು ಪಂಚಾಯಿತಿ ಆವರಣದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಡಗಿನ ಬಸಪ್ಪ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ ಗೌರವ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಹಾಗೂ ದೇಶದ ಅಭಿವೃದ್ಧಿಗೆ ಅವರು ನೀಡಿದ ಕೊಡುಗೆಯನ್ನು ಸ್ಮರಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದರು.

ಸರ್ಕಾರದ ವಿವಿಧ ಅಭಿವೃದ್ಧಿ ಹಾಗೂ ಜನಪರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಮೂಲಕ ಗ್ರಾಮೀಣ ಜನರ ಬದುಕನ್ನು ಸುಧಾರಿಸಲು ಅಧಿಕಾರಿಗಳು ಮತ್ತು ಸಿಬ್ಬಂದಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲ್ಲೂಕು ಅಧ್ಯಕ್ಷ ಎಸ್. ನೂರುದ್ದೀನ್, ಗ್ರಾಮೀಣ ಉದ್ಯೋಗದ ಸಹಾಯಕ ನಿರ್ದೇಶಕ ವಸಂತ್ ರಾಜ್, ಪಿಎಂ ಪೋಷಣ್ ನಿರ್ದೇಶಕ ಶ್ರೀಧರ್ ಮೂರ್ತಿ, ಪಂಚಾಯತ್ ರಾಜ್ ಸಹಾಯಕ ನಿರ್ದೇಶಕ ಮಹೇಶ್ ಕುಮಾರ್, ಆಡಳಿತ ಶಾಖೆಯ ರೋಷನ್ ಜಮೀರ್, ವ್ಯವಸ್ಥಾಪಕ ರಮೇಶ್ ಸೇರಿದಂತೆ ತಾಲ್ಲೂಕು ಪಂಚಾಯಿತಿಯ ವಿವಿಧ ಅಧಿಕಾರಿಗಳು ಹಾಗೂ ಸಿಬ್ಬಂದಿ, ಗೃಹರಕ್ಷಕ ದಳದ ಅಧಿಕಾರಿ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

ರಾಷ್ಟ್ರಗೀತೆ ಹಾಗೂ ದೇಶಭಕ್ತಿಗೀತೆಗಳ ಗಾಯನ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿತು. ಅಧಿಕಾರಿಗಳು, ಸಿಬ್ಬಂದಿ ಹಾಗೂ ಗೃಹರಕ್ಷಕ ದಳದ ಸಿಬ್ಬಂದಿ ದೇಶದ ಏಕತೆ, ಅಖಂಡತೆ ಮತ್ತು ಸಂವಿಧಾನದ ಆಶಯಗಳನ್ನು ಗೌರವಿಸುವ ಸಂಕಲ್ಪದೊಂದಿಗೆ ಸ್ವಾತಂತ್ರ್ಯೋತ್ಸವದಲ್ಲಿ ಪಾಲ್ಗೊಂಡರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News