ಸಂಡೂರು/ಬಳ್ಳಾರಿ: ಕುರೇಕುಪ್ಪ ಪಟ್ಟಣದಲ್ಲಿ ಹೆಚ್ಚುತ್ತಿರುವ ಕಳ್ಳತನ ಪ್ರಕರಣಗಳು, ಗಾಂಜಾ ಸೇವನೆ ಹಾಗೂ ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಅಡ್ಡಾದಿಡ್ಡಿ ವಾಹನ ನಿಲುಗಡೆ ಸಮಸ್ಯೆಯನ್ನು ನಿಯಂತ್ರಿಸುವಂತೆ ಆಗ್ರಹಿಸಿ, ಕರ್ನಾಟಕ ರಕ್ಷಣಾ ವೇದಿಕೆಯ ಕುರೇಕುಪ್ಪ ಘಟಕದ ವತಿಯಿಂದ ತೋರಣಗಲ್ಲು ಪೊಲೀಸ್ ಠಾಣೆಯ ನೂತನ ಪಿಎಸ್‌ಐ ಅಶೋಕ್ ಬೇವೂರು ಅವರಿಗೆ ಮನವಿ ಸಲ್ಲಿಸಲಾಯಿತು.

ಪಟ್ಟಣದಲ್ಲಿ ಪ್ರತಿದಿನ ನಿಯಮಿತ ಪೊಲೀಸ್ ಬೀಟ್ ಹಾಗೂ ಗಸ್ತು ವ್ಯವಸ್ಥೆ ಜಾರಿಗೊಳಿಸಿ, ಕಳ್ಳತನ ಮತ್ತು ಅಹಿತಕರ ಘಟನೆಗಳಿಗೆ ಕಡಿವಾಣ ಹಾಕಬೇಕು ಎಂದು ವೇದಿಕೆಯ ಪದಾಧಿಕಾರಿಗಳು ಒತ್ತಾಯಿಸಿದರು.

ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ವಾಹನಗಳನ್ನು ಅಡ್ಡಾದಿಡ್ಡಿಯಾಗಿ ನಿಲುಗಡೆ ಮಾಡುವುದರಿಂದ ಪಾದಚಾರಿಗಳು, ಸಾರ್ವಜನಿಕರು ಹಾಗೂ ಬಸ್ ಮತ್ತು ಭಾರೀ ವಾಹನಗಳ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಿ, ಸಾರ್ವಜನಿಕರ ಸುರಕ್ಷತೆ ಹಾಗೂ ಸುಗಮ ಸಂಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಮಲ್ಲಯ್ಯ ಎನ್., ಪ್ರಧಾನ ಕಾರ್ಯದರ್ಶಿ ಹೊನ್ನೂರ್ ಸ್ವಾಮಿ ಎನ್., ಗೌರವಾಧ್ಯಕ್ಷ ದೇವಣ್ಣ ಎನ್., ತಾಯಪ್ಪ ಹೆಚ್., ಸಿದ್ದೇಶ್ ಪಿ. ಸೇರಿದಂತೆ ಹಲವು ಸದಸ್ಯರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor