×
Ad

Ballari | ದಲಿತ ಸಂಘರ್ಷ ಸಮಿತಿ ತಾಲೂಕು ಹಾಗೂ ಯುವ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಕೆ.ಜಾಫರ್ ಆಯ್ಕೆ

Update: 2026-06-12 20:02 IST

ಬಳ್ಳಾರಿ/ಕಂಪ್ಲಿ: ಪಟ್ಟಣದ ಅತಿಥಿ ಗೃಹದಲ್ಲಿ ನಡೆದ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಬುದ್ಧ, ಬಸವ, ಅಂಬೇಡ್ಕರ್ ವಾದ) ಸಂಘಟನಾ ಸಭೆಯಲ್ಲಿ ತಾಲೂಕು ಮತ್ತು ಯುವ ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ಶುಕ್ರವಾರ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಜಿಲ್ಲಾ ಉಪಾಧ್ಯಕ್ಷ ಕರಡಿ ವಲಿಸಾಬ್ ಅವರ ಮಾರ್ಗದರ್ಶನದಲ್ಲಿ ಹಾಗೂ ತಾಲೂಕು ಅಧ್ಯಕ್ಷ ಸಿ. ಬಸವರಾಜ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತಾಲೂಕು ಉಪಾಧ್ಯಕ್ಷರಾಗಿ ಮೆಟ್ರಿ ಸೋಮಪ್ಪ ಹಾಗೂ ತಾಲೂಕು ಯುವ ಘಟಕದ ಅಧ್ಯಕ್ಷರಾಗಿ ಕೆ. ಜಾಫರ್ ಅವರನ್ನು ಆಯ್ಕೆ ಮಾಡಲಾಯಿತು. ನೂತನ ಪದಾಧಿಕಾರಿಗಳಿಗೆ ಆದೇಶ ಪತ್ರ ವಿತರಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಕರಡಿ ವಲಿಸಾಬ್, ತಾಲೂಕು ಸೇರಿದಂತೆ ಬಳ್ಳಾರಿ ಜಿಲ್ಲೆಯಲ್ಲಿ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ರಾಜ್ಯಾದ್ಯಂತ ಘಟಕಗಳನ್ನು ವಿಸ್ತರಿಸಲಾಗುತ್ತಿದೆ. ಜನಪರ ಚಳುವಳಿಗಳಲ್ಲಿ ಕ್ರಿಯಾಶೀಲವಾಗಿ ತೊಡಗಿಸಿಕೊಂಡಿರುವ ಸೇವೆಯನ್ನು ಗುರುತಿಸಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.

ತಾಲೂಕು ಮಟ್ಟದಲ್ಲಿ ಸಂಘಟನೆಯನ್ನು ಬಲಿಷ್ಠಗೊಳಿಸಲು ಜಿಲ್ಲಾ ಸಮಿತಿಯೊಂದಿಗೆ ಸಮನ್ವಯ ಸಾಧಿಸಿ ಕಾರ್ಯನಿರ್ವಹಿಸಬೇಕು. ಜನಪರ ಹೋರಾಟಗಳಿಗೆ ಮುಂಚೂಣಿಯಾಗಿ ನಿಂತು ಸಂಘಟನೆಯ ಘನತೆಗೆ ಧಕ್ಕೆ ಬಾರದಂತೆ ಸಾಮಾಜಿಕ ಚಳುವಳಿಗಳನ್ನು ರೂಪಿಸಬೇಕು ಎಂದು ಅವರು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ತಾಲೂಕು ಗೌರವಾಧ್ಯಕ್ಷ ಚಂದ್ರಶೇಖರ, ಖಜಾಂಚಿ ಗಂಗಾಧರ ಸೇರಿದಂತೆ ಸಣ್ಣ ಹುಲುಗಪ್ಪ, ಅಂಜಿನಪ್ಪ, ರುದ್ರಪ್ಪ, ರಫೀಕ್, ಪಕ್ಕೀರಪ್ಪ, ಮಾರೆಪ್ಪ, ಅನ್ವರ್‌ಸಾಬ್, ಕೆ. ಲಕ್ಷ್ಮಣ, ಬಾಲಪ್ಪ ಹಾಗೂ ಯಲ್ಲಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News