×
Ad

ಬಳ್ಳಾರಿ | ಎಟಿಎಂಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸುವಾಗಲೇ ಪೊಲೀಸರಿಗೆ ಸಿಕ್ಕಿ ಬಿದ್ದ ಆರೋಪಿ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

Update: 2025-08-13 20:43 IST

ಬಳ್ಳಾರಿ: ಮಧ್ಯರಾತ್ರಿ ಎಟಿಎಂಗೆ ನುಗ್ಗಿ ಕಳವು ಮಾಡಲು ಮುಂದಾಗಿದ್ದಾಗ ಯುವಕನೋರ್ವ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಘಟನೆ ಬಳ್ಳಾರಿಯ ಕಾಳಮ್ಮ ಸರ್ಕಲ್ ಬಳಿ ನಡೆದಿದೆ. 

ಬಳ್ಳಾರಿಯ ಕಾಳಮ್ಮ ಸರ್ಕಲ್ ಬಳಿ ಇರುವ ಆಕ್ಸಿಸ್ ಬ್ಯಾಂಕ್ ಎಟಿಎಂಗೆ ನುಗ್ಗಿ ಕಳ್ಳತನಕ್ಕೆ ಯತ್ಮಿಸುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. 

ಆಂಧ್ರ ಪ್ರದೇಶದ ಅನಂತಪುರದ ವೆಂಕಟೇಶ ಬಂಧಿತ ಆರೋಪಿ.

ಆರೋಪಿಯು ಎಟಿಎಂಗೆ ನುಗ್ಗಿ ಎಟಿಎಂ ಬಾಕ್ಸ್ ಹೊತ್ತೊಯ್ಯಲು ಯತ್ನಿಸುತ್ತಿರುವ ಕುರಿತು ಬಂದ ಮಾಹಿತಿ ಬೆನ್ನಲ್ಲೇ ಎಎಸ್ಐ ಮಲ್ಲಿಕಾರ್ಜುನ ಕಾರ್ಯಾಚರಣೆಗೆ ಧಾವಿಸಿದ್ದು, ಬೀಟ್​​ನ ಇತರ ಪೊಲೀಸರಿಗೂ ಮಾಹಿತಿ ನೀಡಿದ್ದರು.

ಸ್ಥಳಕ್ಕೆ ಧಾವಿಸಿದ ಎಎಸ್ಐ ಮಲ್ಲಿಕಾರ್ಜುನ ಅವರಿಗೆ ಆರೋಪಿ ಎಟಿಎಂ ಒಳಗೆ ಇರುವುದು ಕಾಣಿಸಿದೆ. ತಕ್ಷಣವೇ ಅವರು ಆರೋಪಿಯ ಬಂಧಿಸಲು ಯತ್ನಿಸಿದ್ದಾರೆ. ಈ ವೇಳೆ ಆತ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಈ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News