×
Ad

ಬಳ್ಳಾರಿ | ಗ್ರಾಮೀಣ ಸ್ವಚ್ಛತೆಯಲ್ಲಿ ಘನ ತಾಜ್ಯ ನಿರ್ವಹಣಾ ಸಿಬ್ಬಂದಿಯ ಪಾತ್ರ ಪ್ರಮುಖ : ಶಶಿಕಾಂತ ಶಿವಪೂರೆ

ಮೂರು ದಿನಗಳ ವಸತಿ ಸಹಿತ ತರಬೇತಿ ಕಾರ್ಯಗಾರ ಉದ್ಘಾಟನೆ

Update: 2026-01-01 19:50 IST

ಬಳ್ಳಾರಿ : ಗ್ರಾಮಗಳಲ್ಲಿ ಸ್ವಚ್ಛತೆ ಕಾಪಾಡುವಲ್ಲಿ ಘನ ತಾಜ್ಯ ನಿರ್ವಹಣಾ ಘಟಕದ ವಾಹನ ಚಾಲಕರು ಹಾಗೂ ಸಹಾಯಕ ಮಹಿಳಾ ಸದಸ್ಯರ ಪಾತ್ರ ಅತ್ಯಂತ ಪ್ರಮುಖವಾಗಿದ್ದು, ಸ್ವಚ್ಛತಾ ಕಾರ್ಯವನ್ನು ಆದ್ಯತೆಯಾಗಿ ಪರಿಗಣಿಸಬೇಕು ಎಂದು ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಶಿಕಾಂತ ಶಿವಪೂರೆ ಹೇಳಿದರು.

ಮಹಾತ್ಮಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ ಬೆಂಗಳೂರು, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ ಬೆಂಗಳೂರು, ಕಿತ್ತೂರುರಾಣಿ ಚೆನ್ನಮ್ಮ ಮಹಿಳಾ ಸ್ವಸಹಾಯ ಸಂಘ, ಹರಪನಹಳ್ಳಿ ಹಾಗೂ ಜಿಲ್ಲಾ ಪಂಚಾಯತ್ ಇವರ ಸಹಯೋಗದಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಘನ ತಾಜ್ಯ ನಿರ್ವಹಣಾ ಘಟಕಗಳಲ್ಲಿ ಕಾರ್ಯನಿರ್ವಹಿಸುವ ವಾಹನ ಚಾಲಕರು ಹಾಗೂ ಸಹಾಯಕ ಮಹಿಳಾ ಸದಸ್ಯರಿಗಾಗಿ ಜಿಲ್ಲಾ ಸಂಪನ್ಮೂಲ ತರಬೇತಿ ಕೇಂದ್ರದಲ್ಲಿ ಗುರುವಾರ ಆಯೋಜಿಸಿದ್ದ ಮೂರು ದಿನಗಳ ವಸತಿ ಸಹಿತ ಪುನಶ್ಚೇತನ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಹಾಯಕ ನಿರ್ದೇಶಕ ಬಸವರಾಜ್ ಹಿರೇಮಠ, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ರಾಜೇಂದ್ರ, ಜಿಲ್ಲಾ ವ್ಯವಸ್ಥಾಪಕ ವಿಜಯ್ ಕುಮಾರ್ ಪಿ., ಸಂಪನ್ಮೂಲ ವ್ಯಕ್ತಿಗಳಾದ ಗಣೇಶ್, ಬಳ್ಳಾರಿ ಮತ್ತು ಸಂಡೂರು ತಾಲ್ಲೂಕಿನ ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ ಗಂಗಾಧರ ಹಾಗೂ ಸೋಮಶೇಖರ್ ಕೆ., ವಲಯ ಮೇಲ್ವಿಚಾರಕ ಗಂಗಾಧರ ಸ್ವಾಮಿ ಸೇರಿದಂತೆ ಜಿಲ್ಲಾ ಪಂಚಾಯತ್ ಸಿಬ್ಬಂದಿ ಉಪಸ್ಥಿತರಿದ್ದರು.

ಇದೇ ವೇಳೆ ಬಳ್ಳಾರಿ ಮತ್ತು ಸಂಡೂರು ತಾಲ್ಲೂಕಿನ ಘನ ತಾಜ್ಯ ನಿರ್ವಹಣಾ ಘಟಕದ ವಾಹನ ಚಾಲಕರು ಹಾಗೂ ಸಹಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News