×
Ad

Ballari | ಸೋಮಲಾಪುರದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆಗೆ ಮತದಾರರ ಪರಿಷ್ಕರಣೆ ಅರ್ಜಿ ವಿತರಣೆ

Update: 2026-07-04 18:44 IST

ಬಳ್ಳಾರಿ/ಕಂಪ್ಲಿ: ತಾಲ್ಲೂಕಿನಲ್ಲಿ ನಡೆಯುತ್ತಿರುವ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನಕ್ಕೆ ವೇಗ ಸಿಕ್ಕಿದ್ದು, ವಿವಿಧ ಗ್ರಾಮಗಳು ಹಾಗೂ ಪಟ್ಟಣಗಳಲ್ಲಿ ಗಣ್ಯರು, ಜನಪ್ರತಿನಿಧಿಗಳು ಮತ್ತು ಪ್ರಶಸ್ತಿ ಪುರಸ್ಕೃತ ಕಲಾವಿದರಿಗೆ ಎನ್ಯುಮರೇಷನ್ ಅರ್ಜಿಗಳನ್ನು ವಿತರಿಸುವ ಮೂಲಕ ಮತದಾರರ ಜಾಗೃತಿ ಮೂಡಿಸಲಾಗುತ್ತಿದೆ.

ದೇವಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೋಮಲಾಪುರ ಗ್ರಾಮದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬುರ್ರಕಥಾ ಕಲಾವಿದೆ ಅಶ್ವಪೆದ್ದ ರಾಮಕ್ಕ ಅವರ ಮನೆಗೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಭೇಟಿ ನೀಡಿ, ಅವರನ್ನು ಸನ್ಮಾನಿಸಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಮಾಹಿತಿ ನೀಡಿದರು. ಜೊತೆಗೆ ಗ್ರಾಮಸ್ಥರಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಬಗ್ಗೆ ಜಾಗೃತಿ ಮೂಡಿಸುವಂತೆ ಮನವಿ ಮಾಡಿದರು.

ದೇವಲಾಪುರ ಗ್ರಾಮ ಪಂಚಾಯಿತಿ ಪಿಡಿಒ ಮಲ್ಲಿಕಾರ್ಜುನ ಮಾತನಾಡಿ, ಸುಳ್ಳು ಸುದ್ದಿಗಳಿಗೆ ಕಿವಿಗೊಡದೆ ಮತದಾರರು ಅಗತ್ಯ ದಾಖಲೆಗಳನ್ನು ಸಲ್ಲಿಸಿ ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸರಿಯಾಗಿ ನೋಂದಾಯಿಸಿಕೊಳ್ಳಬೇಕು ಎಂದು ತಿಳಿಸಿದರು. ಒಂದು ತಿಂಗಳ ಕಾಲ ಅಭಿಯಾನ ನಡೆಯಲಿದ್ದು, ಬಳಿಕ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗುತ್ತದೆ. ಅದರಲ್ಲಿ ತಪ್ಪುಗಳಿದ್ದರೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News