×
Ad

ಬಳ್ಳಾರಿ | ಸರಕಾರಿ ಐಟಿಐ ಕಾಲೇಜು ಪ್ರವೇಶಾತಿಗೆ ಅರ್ಜಿ ಆಹ್ವಾನ

Update: 2025-05-14 19:55 IST

ಬಳ್ಳಾರಿ : ನಗರದ ರೇಡಿಯೋ ಪಾರ್ಕ್ ಹತ್ತಿರದ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಪ್ರಸಕ್ತ ಸಾಲಿಗೆ ವಿವಿಧ ವೃತ್ತಿಗಳಿಗೆ ಪ್ರವೇಶಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯರಾದ ಪಂಡಿತಾರಾದ್ಯ ಅವರು ತಿಳಿಸಿದ್ದಾರೆ.

10 ನೇ ತರಗತಿ ಪಾಸ್/ಫೇಲ್ ಆದ ಅಭ್ಯರ್ಥಿಗಳು ವೆಬ್ ಸೈಟ್ ವಿಳಾಸ www.cite.karnataka.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದ್ದು, ಇಲ್ಲವೇ ನೇರವಾಗಿ ಸಂಸ್ಥೆಗೆ ಭೇಟಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಮೇ 29 ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಅರ್ಜಿಯಲ್ಲಿ ನಮೂದಿಸಿದ ಸಂಸ್ಥೆಯಲ್ಲಿ ಮಾತ್ರ ದಾಖಲೆ ಪರಿಶೀಲನೆಗೆ ಕಡ್ಡಾಯವಾಗಿ ಹಾಜರಾಗಬೇಕು.

ವಿಶೇಷ ಸೂಚನೆ :

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಸಮಯದಲ್ಲಿ ನೀಡುವ ಮೊಬೈಲ್ ಸಂಖ್ಯೆ ಹಾಗೂ ಇ-ಮೇಲ್ ವಿಳಾಸವನ್ನು ಪ್ರವೇಶಾತಿ ಮತ್ತು ಪರೀಕ್ಷೆ ಮುಗಿಯುವವರೆಗೂ ಬದಲಾವಣೆ ಮಾಡುವಂತಿಲ್ಲ.

ಹೆಚ್ಚಿನ ಮಾಹಿತಿಗಾಗಿ ಮೊ.9916300462 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News