×
Ad

ಬಳ್ಳಾರಿ | ಬಾಲಕ ನಾಪತ್ತೆ : ಪತ್ತೆಗಾಗಿ ಮನವಿ

Update: 2025-07-08 16:36 IST

ಬಳ್ಳಾರಿ : ನಗರದ ದೇವಿನಗರ ಬಡಾವಣೆಯ 1ನೇ ಕ್ರಾಸ್‌ನ ಸರ್ಕಾರಿ ವೀಕ್ಷಣಾಲಯದಲ್ಲಿ ದಾಖಲಾದ ಮಾರುತಿ ಎಂಬ 16 ವರ್ಷದ ಬಾಲಕ ಜು.6 ರಂದು ವೀಕ್ಷಣಾಲಯದಿಂದ ಕಾಣೆಯಾಗಿದ್ದು, ಈ ಕುರಿತು ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಾಲಕನ ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ತಿಳಿಸಿದ್ದಾರೆ.

ಚಹರೆ: ಅಂದಾಜು 5.7 ಅಡಿ ಎತ್ತರ, ಕಪ್ಪು ಮೈಬಣ್ಣ, ತೆಳುವಾದ ಮೈಕಟ್ಟು ಹೊಂದಿರುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ನೀಲಿ ಬಣ್ಣದ ತುಂಬು ತೋಳಿನ ಟಿ-ಶರ್ಟ್, ಬೂದಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾನೆ.

ಮೇಲ್ಕಂಡ ಚಹರೆ ಗುರುತುಗಳುಳ್ಳ ಬಾಲಕ ಬಗ್ಗೆ ಮಾಹಿತಿ ಸಿಕ್ಕಲ್ಲಿ ಕೌಲ್ ಬಜಾರ್ ಪೊಲೀಸ್ ಠಾಣೆಯ ದೂ.08392-240731, 244145, ಪಿಐ ಮೊ.9480803047, ಪಿಎಸ್‌ಐ ಮೊ.94808203085 ಮತ್ತು ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News