×
Ad

ಬಳ್ಳಾರಿ | ಗುಡಿಗಳನ್ನು ನಿರ್ಮಾಣ ಮಾಡುವುದಕ್ಕಿಂತ ಗ್ರಂಥಾಲಯವನ್ನು ನಿರ್ಮಿಸುವುದು ಸರ್ವಶ್ರೇಷ್ಠ : ಶಾಸಕ ಜೆ.ಎನ್.ಗಣೇಶ

Update: 2025-10-29 22:00 IST

ಬಳ್ಳಾರಿ / ಕಂಪ್ಲಿ : ಜಗತ್ತಿನ ಶ್ರೇಷ್ಠ ತತ್ವಜ್ಞಾನಿಗಳು, ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರು ಹೇಳಿದಂತೆ ನೂರಾರು ಗುಡಿಗಳನ್ನು ನಿರ್ಮಾಣ ಮಾಡುವುದಕ್ಕಿಂತ ಒಂದು ಗ್ರಂಥಾಲಯವನ್ನು ನಿರ್ಮಾಣ ಮಾಡುವುದು ಸರ್ವಶ್ರೇಷ್ಠ ಕಾರ್ಯವಾಗಿದೆ ಎಂದು ಶಾಸಕ ಜೆ.ಎನ್.ಗಣೇಶ ತಿಳಿಸಿದರು.

ಅವರು ಪಟ್ಟಣದ ಐತಿಹಾಸಿಕ ಸೋಮಪ್ಪನ ಕೆರೆ ಆವರಣದಲ್ಲಿ ಕೆ.ಕೆ.ಆರ್.ಡಿ.ಬಿ, ಎನ್.ಎಂ.ಡಿಸಿಯ ಸಿ.ಎಸ್.ಆರ್. ಮತ್ತು ಟಿ.ಎಸ್.ಪಿ.ಎಸ್.ಸಿ.ಪಿಯ ಸುಮಾರು 1.30 ಕೋಟಿ ರೂ.ಗಳ ವೆಚ್ಚದಲ್ಲಿ (ಪಿಇಬಿ) ಪ್ರೀ ಎಂಜಿನಿಯರ್ಡ್ ಬಿಲ್ಡಿಂಗ್ ಮಾದರಿಯಲ್ಲಿ ನಿರ್ಮಾಣ ಮಾಡಲಾದ ನೂತನ ಸಾರ್ವಜನಿಕ ಗ್ರಂಥಾಲಯವನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು.

ಸಾವಿರಾರು ರೂ. ಗಳನ್ನು ಕೊಟ್ಟು ಪುಸ್ತಕಗಳನ್ನು ಖರೀದಿ ಮಾಡಿ ಓದಲು ಆಗದ ಮಕ್ಕಳಿಗೆ ಸಾರ್ವಜನಿಕ ಗ್ರಂಥಾಲಯ ಅನುಕೂಲವನ್ನು ಕಲ್ಪಿಸಲಿದೆ. ವಿದ್ಯಾರ್ಥಿಗಳು ಮೊಬೈಲ್‌ ಗಳಲ್ಲಿ ಕಾಲ ಕಳೆಯುವುದಕ್ಕಿಂತ  ಗ್ರಂಥಾಲಯಗಳಲ್ಲಿ ಪುಸ್ತಕಗಳನ್ನು ಓದುವ ಮೂಲಕ ಉತ್ತಮ ಜ್ಞಾನಾರ್ಜನೆ ಪಡೆದುಕೊಳ್ಳಬೇಕು ಎಂದರು.

ಜಿಲ್ಲಾ ಕೇಂದ್ರ ಗ್ರಂಥಾಲಯದ ಉಪ ನಿರ್ದೇಶಕಿ ಜೆ.ಲಕ್ಷ್ಮೀ ಕಿರಣ, ಪುರಸಭೆ ಅಧ್ಯಕ್ಷ ಬಟ್ಟ ಪ್ರಸಾದ್ ಮಾತನಾಡಿದರು.

ಕಾರ್ಯಕ್ರಮದಲ್ಲಿ ಕುರುಗೋಡು ಪುರಸಭೆ ಅಧ್ಯಕ್ಷ ಶೇಖಪ್ಪ, ಕಂಪ್ಲಿ ಪುರಸಭೆ ಸ್ಥಾಯಿ ಸಮಿತಿ ಚೇರಮನ್ ಎಂ.ಉಸ್ಮಾನ್, ಎಪಿಎಂಸಿ ಅಧ್ಯಕ್ಷ ಎನ್.ಹಬೀಬ್ ರೆಹಮಾನ್, ಪುರಸಭೆ ಸದಸ್ಯರಾದ ಸಿ.ಆರ್.ಹನುಮಂತ, ಕೆ.ಎಸ್.ಚಾಂದ್ ಬಾಷಾ,ದಿಶಾ ಸಮಿತಿ ಸದಸ್ಯ ಎ.ಸಿ.ದಾನಪ್ಪ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ವೀರೇಶ್, ಗನಿಸಾಬ್, ಗ್ಯಾರಂಟಿ ಯೋಜನೆ ತಾಲ್ಲೂಕು ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಶ್ರೀನಿವಾಸರಾವ್, ಮುಖಂಡರಾದ ಕೋಟೆ ಷಣ್ಮುಖ, ಬಿ.ನಾರಾಯಣಪ್ಪ, ಎಂ.ಸುಧಿರ್, ಬಿ.ಸಿದ್ದಪ್ಪ, ಕೆ.ಮನೋಹರ್, ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಜಗಧೀಶ್, ನರಸಣ್ಣ, ಎಸ್.ಟಿ.ಪ್ರಭಾಕರ್, ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು, ಉಪನ್ಯಾಸಕರು, ಸಾರ್ವಜನಿಕರು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News