ಬಳ್ಳಾರಿ | ಬುಡಕಟ್ಟು ಜನರು ವಾಸಿಸುವ ಪ್ರದೇಶಗಳ ಸಮಗ್ರ ಅಭಿವೃದ್ಧಿ : ಆಶಿಶ್ ಕುಮಾರ್
ಬಳ್ಳಾರಿ,ಆ.19 : ಬುಡಕಟ್ಟು ಜನರು ವಾಸಿಸುವ ಪ್ರದೇಶಗಳ ಸಮಗ್ರ ಅಭಿವೃದ್ಧಿ ಹಾಗೂ ಸಮುದಾಯದ ಸಬಲೀಕರಣಕ್ಕೆ ಆದಿ ಕರ್ಮಯೋಗಿ ಅಭಿಯಾನ ಸಹಕಾರಿ ಎಂದು ನವದೆಹಲಿಯ ಕೇಂದ್ರ ಬುಡಕಟ್ಟುಗಳ ಮಂತ್ರಾಲಯ ಅಧೀನ ಕಾರ್ಯದರ್ಶಿ ಆಶಿಶ್ ಕುಮಾರ್ ಅವರು ಹೇಳಿದರು.
ಜಿಲ್ಲೆಯಲ್ಲಿ ಆಯ್ದ ತಾಲ್ಲೂಕುಗಳಲ್ಲಿ ಕೇಂದ್ರ ಸರ್ಕಾರದ ‘ಆದಿ ಕರ್ಮಯೋಗಿ ಅಭಿಯಾನ’ ಯಶಸ್ವಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ನಗರದ ವಾಲ್ಮೀಕಿ ಭವನದಲ್ಲಿ ತಾಲ್ಲೂಕು ಮಟ್ಟದ ತರಬೇತುದಾರರಿಗೆ ಮಂಗಳವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಕೇಂದ್ರ ಸರ್ಕಾರದ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ ಇವರ ಆದೇಶದಂತೆ ಆದಿ ಕರ್ಮಯೋಗಿ ಅಭಿಯಾನ ಯೋಜನೆಯಡಿ ಬುಡಕಟ್ಟು ಜನಾಂಗದವರು ಹೆಚ್ಚಾಗಿರುವ ಬಳ್ಳಾರಿ ಜಿಲ್ಲೆಯ 5 ತಾಲ್ಲೂಕುಗಳಿಂದ ಒಟ್ಟು 59 ಗ್ರಾಮಗಳನ್ನು ಆಯ್ಕೆ ಮಾಡಿದ್ದು, ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದರು.
ಆಯ್ಕೆಯಾದ ಗ್ರಾಮಗಳಲ್ಲಿ ಮೂಲಭೂಯ ಸೌಕರ್ಯಗಳಾದ ರಸ್ತೆ, ಕುಡಿಯುವ ನೀರು, ಆರೋಗ್ಯ, ದೂರವಾಣಿ ಸಂಪರ್ಕ, ವಿದ್ಯುತ್‌ಚ್ಛಕ್ತಿ, ವಸತಿ ನಿರ್ಮಾಣ, ಅಂಗನವಾಡಿ ಕೇಂದ್ರಗಳ ಸ್ಥಾಪನೆ, ಆರೋಗ್ಯ ಕಾರ್ಡ್, ಜಾತಿ ಪ್ರಮಾಣ ಪತ್ರ, ಅರಣ್ಯ ಹಕ್ಕು ಯೋಜನೆಯಡಿ ಅರ್ಹರಿಗೆ ಹಕ್ಕು ಪತ್ರ ಒದಗಿಸಲಾಗುವುದು ಎಂದು ಹೇಳಿದರು.
ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ರಾಜು ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಆಯ್ಕೆಯಾದ ತಾಲ್ಲೂಕುಗಳ ತರಬೇತುದಾರರು ಭಾಗವಹಿಸಿದ್ದರು.