×
Ad

ಬಳ್ಳಾರಿ | ಮಹನೀಯರ ಜಯಂತಿಯನ್ನು ಅರ್ಥಪೂರ್ಣ ಆಚರಣೆಗೆ ನಿರ್ಧಾರ : ಎಸಿ ಪ್ರಮೋದ್

Update: 2025-07-31 19:58 IST

ಬಳ್ಳಾರಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ಕಾಯಕಯೋಗಿ ನುಲಿಯ ಚಂದಯ್ಯ, ಶ್ರೀಕೃಷ್ಣ ಜಯಂತಿ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಸಹಾಯಕ ಆಯುಕ್ತ ಪಿ.ಪ್ರಮೋದ್ ಅವರು ಹೇಳಿದರು.

ಮಹನೀಯರ ಜಯಂತಿ ಆಚರಣೆ ಕುರಿತಂತೆ ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.

ಆ.9 ರಂದು ಕಾಯಕಯೋಗಿ ನುಲಿಯ ಚಂದಯ್ಯ ಮತ್ತು ಆ.16 ರಂದು ಶ್ರೀಕೃಷ್ಣ ಜಯಂತಿ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಆಚರಿಸಲು ಬೇಕಾದ ಎಲ್ಲಾ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಶಿಷ್ಠಾಚಾರದನ್ವಯ ಆಹ್ವಾನ ಪತ್ರಿಕೆ ಮುದ್ರಿಸಿ ಗಣ್ಯರನ್ನು ಆಹ್ವಾನಿಸಲಾಗುವುದು. ಮೆರವಣಿಗೆಯಲ್ಲಿ ಎರಡು ಸಾಂಸ್ಕೃತಿಕ ಕಲಾತಂಡಗಳನ್ನು ನಿಯೋಜಿಸಲಾಗುವುದು. ವೇದಿಕೆ ಕಾರ್ಯಕ್ರಮದಲ್ಲಿ ಮಹನೀಯರ ಚರಿತ್ರೆಯನ್ನು ತಿಳಿಯಪಡಿಸಲು ನುರಿತರಿಂದ ವಿಶೇಷ ಉಪನ್ಯಾಸ, ವಚನ ಗಾಯನ ಸಂಗೀತ ಆಯೋಜಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಮಹಾನಗರ ಪಾಲಿಕೆ ಸದಸ್ಯ ಗಾದೆಪ್ಪ ಸೇರಿದಂತೆ ಸಮುದಾಯದ ಮುಖಂಡರು ಹಾಗೂ ಇತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News