×
Ad

ಬಳ್ಳಾರಿ | ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ, ಮಾರಾಟ ಮೇಳಕ್ಕೆ ಚಾಲನೆ

Update: 2026-02-02 20:46 IST

ಬಳ್ಳಾರಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಇವರ ಸಂಯುಕ್ತಾಶ್ರಯದಲ್ಲಿ, ನಗರದ ಶ್ರೀ ಕೋಟೆ ಮಲ್ಲೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಮೂರು ದಿನಗಳ (ಫೆ.1ರಿಂದ 3ರವರೆಗೆ) ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮುಹಮ್ಮದ್ ಹಾರೀಸ್ ಸುಮೇರ್ ಅವರು ಭಾನುವಾರ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗ್ರಾಮೀಣ ಭಾಗದ ಮಹಿಳಾ ಸ್ವ-ಸಹಾಯ ಸಂಘಗಳ ಸದಸ್ಯರು ತಯಾರಿಸಿದ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವ ಉದ್ದೇಶದಿಂದ ಮೇಳ ಆಯೋಜಿಸಲಾಗಿದೆ. ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಇಂತಹ ಕಾರ್ಯಕ್ರಮಗಳು ಸಹಕಾರಿಯಾಗಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡಿ ಮೇಳದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.

ಮೇಳದಲ್ಲಿ ಮಹಿಳಾ ಸ್ವ-ಸಹಾಯ ಸಂಘಗಳ ಸದಸ್ಯರು ತಯಾರಿಸಿದ ವಿವಿಧ ಬಗೆಯ ಕೈಗಾರಿಕಾ ಹಾಗೂ ಗೃಹೋಪಯೋಗಿ ಉತ್ಪನ್ನಗಳನ್ನು ಪ್ರದರ್ಶನ ಮತ್ತು ಮಾರಾಟಕ್ಕೆ ಇಡಲಾಗಿತ್ತು.

ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಪಿ. ರವಿಕುಮಾರ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಶಿಕಾಂತ್ ಶಿವಪುರೆ, ಜಿಪಂ ಮುಖ್ಯ ಯೋಜನಾಧಿಕಾರಿ ವಾಗೀಶ್ ಶಿವಾಚಾರ್ಯ, ಜಿಪಂ ಯೋಜನಾ ನಿರ್ದೇಶಕ ಬಸವರಾಜ ಹಿರೇಮಠ, ಜಿಪಂ ಮುಖ್ಯ ಲೆಕ್ಕಾಧಿಕಾರಿ ವಿನೋದ್ ಕುಮಾರ್ ಸೇರಿದಂತೆ ಎನ್‌ಆರ್‌ಎಲ್‌ಎಂ ಯೋಜನೆಯ ಸಿಬ್ಬಂದಿಗಳು ಮತ್ತು ಮಹಿಳಾ ಸ್ವ-ಸಹಾಯ ಸಂಘಗಳ ಸದಸ್ಯರುಗಳು ಉಪಸ್ಥಿತರಿದ್ದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News