×
Ad

ಬಳ್ಳಾರಿ| ಕರ್ನಾಟಕ ಕಾರ್ಯನಿರತ ಪ್ರರ್ತಕರ್ತರ ಸಂಘದ ತಾಲೂಕು ಘಟಕಕ್ಕೆ ಪದಾಧಿಕಾರಿಗಳ ಆಯ್ಕೆ

Update: 2025-12-09 20:27 IST

ಬಳ್ಳಾರಿ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಂಪ್ಲಿ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆಗೆ ಚುನಾವಣೆ ಅತಿಥಿಗೃಹದ ಆವರಣದಲ್ಲಿ ಸೋಮವಾರ ನಡೆಯಿತು.

ಸಂಘದ ಜಿಲ್ಲಾಧ್ಯಕ್ಷ ಎನ್.ವೀರಭದ್ರಗೌಡ ಮಾತನಾಡಿ, ಪತ್ರಕರ್ತರು ಸಮಾಜದ ಧ್ವನಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಾಜ್ಯದಲ್ಲಿನ ಬಹುತೇಕ ಪತ್ರಕರ್ತರು ಯಾವುದೇ ಜೀವನ ಭದ್ರತೆಯಿಲ್ಲದೇ ಸಂಕಷ್ಟದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಮಾಜದಲ್ಲಿನ ಅಂಕು ಡೊಂಕು, ಸರಕಾರ ಹಾಗೂ ಜನ ಪ್ರತಿನಿಧಿಗಳನ್ನು ಎಚ್ಚರಿಸುವ ಹಾಗೂ ಸಾಮಾಜಿಕ ವ್ಯವಸ್ಥೆಯಲ್ಲಿ ವ್ಯತ್ಯಾಸವಾದಲ್ಲಿ ಬರಹ ಮೂಲಕ ಜಾಗೃತಿ ಮೂಡಿಸುವ ಪ್ರಾಮಾಣಿಕ ಪ್ರಯತ್ನ ನಡೆದಿದೆ ಎಂದು ತಿಳಿಸಿದರು.

ತಾಲೂಕು ಘಟಕದ ಅಧ್ಯಕ್ಷರಾಗಿ ಬಂಗಿ ದೊಡ್ಡ ಮಂಜುನಾಥ, ಉಪಾಧ್ಯಕ್ಷರಾಗಿ ಕರಿ ವಿರುಪಾಕ್ಷಿ, ಪ್ರಧಾನ ಕಾರ್ಯದರ್ಶಿಯಾಗಿ ಪಿ.ವೀರೇಶ್, ಕಾರ್ಯದರ್ಶಿಯಾಗಿ ಎಸ್.ಯಮನಪ್ಪ, ಖಜಾಂಚಿಯಾಗಿ ಜೀರು ಗಾದಿಲಿಂಗ, ಸಮಿತಿ ಸದಸ್ಯರಾಗಿ ಎಂ.ಎಸ್.ವಿರೂಪಾಕ್ಷಯ್ಯ, ಸಿ.ವೆಂಕಟೇಶ, ಎಚ್.ಎಂ.ಪಂಡಿತಾರಾಧ್ಯ, ಬಿ.ರಸೂಲ್ ಇವರು ಅವಿರೋಧ ಆಯ್ಕೆಗೊಂಡರು.

ಈ ವೇಳೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರಸಿಂಹಮೂರ್ತಿ ಕುಲಕರ್ಣಿ, ಈನಾಡು ತೆಲಗು ಪತ್ರಕರ್ತರಾದ ಎಂ.ಚಂದ್ರದ್ರಶೇಖರ ಸೇರಿದಂತೆ ಇತರರು ಉಪಸ್ಥಿತರಿದ್ದರು. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News