×
Ad

ಬಳ್ಳಾರಿ | ಶಿಕ್ಷಕರ ಕ್ಷೇತ್ರದ ಚುನಾವಣೆಯ ಅಂತಿಮ ಮತದಾರರ ಪಟ್ಟಿ ಪ್ರಕಟ : ಡಿಸಿ ನಾಗೇಂದ್ರ ಪ್ರಸಾದ್ ಕೆ.

Update: 2025-12-30 22:36 IST

ಬಳ್ಳಾರಿ,ಡಿ.30: ಚುನಾವಣಾ ಆಯೋಗದ ವೇಳಾಪಟ್ಟಿಗನುಗುಣವಾಗಿ ಮಂಗಳವಾರ ವಿಧಾನಪರಿಷತ್‌ನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ. ತಿಳಿಸಿದ್ದಾರೆ.

ಅಂತಿಮ ಮತದಾರರ ಪಟ್ಟಿಯಲ್ಲಿ ಒಟ್ಟು 3,302 ಮತದಾರರು ನೋಂದಣಿಯಾಗಿದ್ದಾರೆ. ಬಳ್ಳಾರಿ, ಬಳ್ಳಾರಿ ನಗರ, ಕಂಪ್ಲಿ, ಕುರುಗೋಡು, ಸಂಡೂರು, ಸಿರುಗುಪ್ಪ ಸೇರಿ ಬಳ್ಳಾರಿ ಜಿಲ್ಲೆಯಲ್ಲಿ ಗಂಡು-1,775, ಹೆಣ್ಣು-1,527 ಸೇರಿ ಒಟ್ಟು 3,302 ಮತದಾರರು ನೋಂದಾಯಿಸಿಕೊಂಡಿದ್ದಾರೆ. ಅಂತಿಮ ಮತದಾರರ ಪಟ್ಟಿಯ ನಿರಂತರ ನೋಂದಣಿ ಪ್ರಕ್ರಿಯೆಯಾಗಿದ್ದು, ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕದವರೆಗೂ ಅರ್ಹರು ಅವಶ್ಯಕ ದಾಖಲೆಗಳೊಂದಿಗೆ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಈಶಾನ್ಯ ಶಿಕ್ಷಕರ ಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News