×
Ad

ಬಳ್ಳಾರಿ| ಹಂಪಾದೇವನಹಳ್ಳಿ ಗ್ರಾಮ ಪಂಚಾಯಿತಿಗೆ ಗಾಂಧಿ ಗ್ರಾಮ ಪುರಸ್ಕಾರ

Update: 2025-12-05 20:45 IST

ಬಳ್ಳಾರಿ : ಕಂಪ್ಲಿ ತಾಲೂಕಿನ ಹಂಪಾದೇವನಹಳ್ಳಿ ಗ್ರಾಮ ಪಂಚಾಯತಿಗೆ ಪ್ರಸಕ್ತ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ಲಭಿಸಿದೆ.

ವಿದ್ಯುತ್ ದೀಪ, ಸ್ವಚ್ಛತೆ, ಶುದ್ಧ ಕುಡಿಯುವ ನೀರು ಸರಬರಾಜು ಸೇರಿದಂತೆ ಮೂಲ ಸೌಕರ್ಯ, ಲೆಕ್ಕ ಪರಿಶೋಧನೆ, ಸರಕಾರದ ಯೋಜನೆಗಳನ್ನು ಜನತೆಗೆ ಯಶಸ್ವಿಯಾಗಿ ತಲುಪಿಸಿರುವುದನ್ನು ಪರಿಗಣಿಸಿ ಹಂಪಾದೇವನಹಳ್ಳಿ ಗ್ರಾಮ ಪಂಚಾಯಿತಿಗೆ ಗಾಂಧಿ ಗ್ರಾಮ ಪುರಸ್ಕಾರ ನೀಡಲಾಗಿದೆ.  

ವಿಧಾನಸೌಧದ ಬ್ಯಾಂಕ್ವೇಟೆ ಹಾಲ್‌ನಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಗ್ರಾ.ಪಂ.ಅಧ್ಯಕ್ಷೆ ಜಿ.ಕವಿತಾ ಪಂಪನಗೌಡ, ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಕೆ.ಬೀರಲಿಂಗ ಅವರು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ ಅವರಿಂದ ಗಾಂಧಿ ಗ್ರಾಮ ಪುರಸ್ಕಾರವನ್ನು ಪಡೆದರು.

ಗ್ರಾ.ಪಂ.ಅಧ್ಯಕ್ಷೆ ಜಿ.ಕವಿತಾ ಪಂಪನಗೌಡ ಹಾಗೂ ಪಿಡಿಒ ಕೆ.ಬೀರಲಿಂಗ ಮಾತನಾಡಿ, ಗ್ರಾ.ಪಂ.ವ್ಯಾಪ್ತಿಯಲ್ಲಿ ಸಾರ್ವಜನಿಕರು, ಎಲ್ಲಾ ಸದಸ್ಯರು, ತಾ.ಪಂ.ಅಧಿಕಾರಿಗಳ ಸಹಕಾರದಿಂದಾಗಿ  ಉತ್ತಮ ಕೆಲಸಗಳನ್ನು ಮಾಡಲು ಸಾಧ್ಯವಾಗಿದೆ ಎಂದು ಹೇಳಿದರು. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News