×
Ad

ಬಳ್ಳಾರಿ | ಮಹರ್ಷಿ ವಾಲ್ಮೀಕಿಯ ಚಿಂತನೆಗಳು ಅಜರಾಮರ : ಪ್ರೊ.ವೆಂಕಟಗಿರಿ ದಳವಾಯಿ

Update: 2025-10-08 21:02 IST

ಬಳ್ಳಾರಿ : ಮಹರ್ಷಿ ವಾಲ್ಮೀಕಿಯ ಚಿಂತನೆಗಳು ಮತ್ತು ಮೌಲ್ಯಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ನಮ್ಮ ಜೀವನ ಅರ್ಥಪೂರ್ಣವಾಗುತ್ತದೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಕನ್ನಡ ಸಾಹಿತ್ಯ ಅಧ್ಯಯನ ವಿಭಾಗದ ಪ್ರೊ.ವೆಂಕಟಗಿರಿ ದಳವಾಯಿ ಅವರು ಹೇಳಿದರು.

ಮಂಗಳವಾರ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮ ದೇಶದ ಪರಂಪರೆ ಕಾಪಾಡುವುದರಲ್ಲಿ ಯುವಕರ ಪಾತ್ರ ಬಹುಮುಖ್ಯವಾಗಿದೆ. ವ್ಯಕ್ತಿಯ ನಡತೆ ಮತ್ತು ಅವನ ಜೀವನವನ್ನು ನಡೆಸಲು ವಾಲ್ಮೀಕಿ ಅವರ ಚಿಂತನೆಗಳು ಮಾರ್ಗದರ್ಶಕವಾಗಿವೆ. ಆಧುನಿಕ ದಿನಗಳಲ್ಲಿ ಜಯಂತಿಗಳು ವರ್ತಮಾನಗಳ ಬಗ್ಗೆ ತಿಳಿಸುತ್ತದೆ ಎಂದರು.

ವಿಶ್ವವಿದ್ಯಾಲಯದ ಕುಲಸಚಿವ ಸಿ.ನಾಗರಾಜು, ವಿಶ್ವವಿದ್ಯಾಲಯದ ಕುಲಸಚಿವ (ಮೌಲ್ಯಮಾಪನ) ಪ್ರೊ.ಎನ್.ಎಂ ಸಾಲಿ,  ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ಜಯಲಕ ಅವರು ಮಾತನಾಡಿದರು.

ಈ ವೇಳೆ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಶಿವಕುಮಾರ, ಪ.ಜಾತಿ ಮತ್ತು ಪ.ಪಂಗಡಗಳ ವಿಶೇಷ ಘಟಕದ ಸಂಯೋಜಕ ಡಾ.ಕುಮಾರ, ವಿದ್ಯಾರ್ಥಿ ಕ್ಷೇಮಪಾಲನ ಘಟಕದ ನಿರ್ದೇಶಕರಾದ ಡಾ.ಗೌರಿ ಮಾಣಿಕ್ ಮಾನಸ ಸೇರಿದಂತೆ ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಬೋಧಕರು, ಸಂಶೋಧನಾ ವಿದ್ಯಾರ್ಥಿಗಳು, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News