×
Ad

ಬಳ್ಳಾರಿ | ಜೂ.25 ರಂದು ಮಿನಿ ಉದ್ಯೋಗ ಮೇಳ

Update: 2025-06-23 16:26 IST

ಬಳ್ಳಾರಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜೂ.25 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ನಗರದ ಹಳೆಯ ತಾಲ್ಲೂಕು ಕಚೇರಿ ಆವರಣದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪಿ.ಎಸ್.ಹಟ್ಟಪ್ಪ ಅವರು ತಿಳಿಸಿದ್ದಾರೆ.

ನಗರದ ಜೊಯಾಲೂಕಸ್ ಜ್ಯೂವೆಲ್ಲರಿ ಕಂಪನಿಯವರು ತಮ್ಮಲ್ಲಿರುವ ಖಾಲಿ ಹುದ್ದೆಗಳಿಗೆ ನೇರ ಸಂದರ್ಶನ ಮೂಲಕ ನೇಮಕ ಮಾಡಿಕೊಳ್ಳುವರು. 25 ವರ್ಷ ಕೆಳಗಿನ ಆಸಕ್ತ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕವಿರುವುದಿಲ್ಲ.

ಎಸೆಸೆಲ್ಸಿ, ಪಿಯುಸಿ, ಡಿಪ್ಲೋಮಾ, ಪದವಿ ವಿದ್ಯಾರ್ಹತೆ ಹೊಂದಿರಬೇಕು. ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಿ, ಇದರ ಸದುಪಯೋಗ ಪಡೆದುಕೊಳ್ಳಬೇಕು. ಪುರುಷರು ಮತ್ತು ಮಹಿಳೆಯರು ಭಾಗವಹಿಸಬಹುದು. ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡ್ ಪ್ರತಿ ಮತ್ತು ಸ್ವ-ವಿವರ (ಬಯೋಡೇಟಾ) ಗಳೊಂದಿಗೆ ಅಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ಮೊ.9742718891, 9663263086, 9900827768, 6360408094 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News