×
Ad

ಬಳ್ಳಾರಿ | ಜಿಟಿಟಿಸಿ ಕೇಂದ್ರಕ್ಕೆ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌ ಭೇಟಿ, ಪರಿಶೀಲನೆ

Update: 2025-10-15 18:54 IST

ಬಳ್ಳಾರಿ : ನಗರದ ರೇಡಿಯೋ ಪಾರ್ಕ್ ಬಳಿಯ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ)ಕ್ಕೆ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ.ಶರಣಪ್ರಕಾಶ್‌ ಪಾಟೀಲ್‌ ಅವರು ಬುಧವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಕೇಂದ್ರದ ಉಪಕರಣಗಾರ ಕೊಠಡಿ, ಸ್ಮಾರ್ಟ್ ಕ್ಲಾಸ್ ರೂಮ್ ಸೇರಿದಂತೆ ಸಭಾಂಗಣ ಕೊಠಡಿ ವೀಕ್ಷಣೆ ಮಾಡಿದ ಸಚಿವರು, ಸೂಕ್ತ ನಿರ್ವಹಣೆ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಅತ್ಯಾಧುನಿಕವಾಗಿ ನಿರ್ಮಾಣಗೊಂಡ ಜಿಟಿಟಿಸಿ ಕೇಂದ್ರವು ಯುವ ಪೀಳಿಗೆಗೆ ಉಪಯುಕ್ತವಾಗಬೇಕು ಎಂದು ತಿಳಿಸಿದರು.

ಇದೇ ವೇಳೆ ಜಿಲ್ಲಾಧಿಕಾರಿಯವರು, ಸಂಡೂರಿನಲ್ಲಿ 25 ಎಕರೆ ಪ್ರದೇಶದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸ್ಕಿಲ್ ಪಾರ್ಕ್ ಬಗ್ಗೆ ಸಚಿವರ ಗಮನಕ್ಕೆ ತಂದರು.

ಈ ವೇಳೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮುಹಮ್ಮದ್ ಹ್ಯಾರೀಸ್ ಸುಮೇರ್, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಹಟ್ಟಪ್ಪ, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಾಯಕ ನಿರ್ದೇಶಕ ವಿಶ್ವನಾಥ, ಜಿಟಿಟಿಸಿ ಕೇಂದ್ರದ ಪ್ರಾಚಾರ್ಯ ಮುತ್ತಣ್ಣ ಸೇರಿದಂತೆ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News