×
Ad

ಗಣರಾಜ್ಯೋತ್ಸವ| ಹೆಚ್.ಆರ್.ಗವಿಯಪ್ಪ ವೃತ್ತದಲ್ಲಿ ಸಚಿವ ರಹೀಂ ಖಾನ್ ಧ್ವಜಾರೋಹಣ

Update: 2026-01-26 19:48 IST

ಬಳ್ಳಾರಿ,ಜ.26:  77ನೇ ಗಣರಾಜ್ಯೋತ್ಸವದ ಅಂಗವಾಗಿ ಪೌರಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಅವರು ನಗರದ ಹೆಚ್.ಆರ್.ಗವಿಯಪ್ಪ ವೃತ್ತದ 150 ಅಡಿ ಎತ್ತರದ ಬೃಹತ್ ಧ್ವಜ ಸ್ತಂಭದಲ್ಲಿ ಸೋಮವಾರ ಧ್ವಜಾರೋಹಣ ನೆರವೇರಿಸಿದರು.

ಇದಕ್ಕೂ ಮುನ್ನ ನಗರದ ಡಾ.ರಾಜ್ ಕುಮಾರ್ ಉದ್ಯಾನವನದಲ್ಲಿ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂಸದ ಈ.ತುಕಾರಾಮ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಪಿ.ಗಾದೆಪ್ಪ, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯುಲು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಪಾಲಿಕೆ ಉಪಮೇಯರ್ ಮುಬೀನಾ, ಬಳ್ಳಾರಿ ವಲಯ ಪೊಲೀಸ್ ಮಹಾನಿರೀಕ್ಷಕ ಡಾ.ಪಿ.ಎಸ್ ಹರ್ಷ, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ ಪೆನ್ನೇಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಸಹಾಯಕ ಆಯುಕ್ತ ರಾಜೇಶ್.ಹೆಚ್.ಡಿ., ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ್‌, ಡಿಎಂಎಫ್ ವಿಶೇಷಾಧಿಕಾರಿ ಲೋಕೇಶ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿ-ಸಿಬ್ಬಂದಿ ವರ್ಗ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News