×
Ad

ಬಳ್ಳಾರಿ | ಆ.9ರಂದು ನುಲಿಯ ಚಂದಯ್ಯ ಜಯಂತಿ ಕಾರ್ಯಕ್ರಮ

Update: 2025-08-05 20:15 IST

ಬಳ್ಳಾರಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಕಾಯಕಯೋಗಿ ನುಲಿಯ ಚಂದಯ್ಯ ಜಯಂತಿ ಕಾರ್ಯಕ್ರಮವನ್ನು ಆ.9 ರಂದು ಬೆಳಿಗ್ಗೆ 11.30 ಗಂಟೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಆಯೋಜಿಸಲಾಗಿದೆ.

ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಬಿ.ಝಡ್.ಝಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.

ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಜೆ.ಎನ್ ಗಣೇಶ್, ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕ ಬಿ.ನಾಗೇಂದ್ರ, ವಿಧಾನಪರಿಷತ್ ಶಾಸಕ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಾಸಕರಾದ ಬಿ.ಎಂ.ನಾಗರಾಜ, ಈ.ಅನ್ನಪೂರ್ಣ, ವಿಧಾನಪರಿಷತ್ ಶಾಸಕ ಶಶೀಲ್ ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಸಿಂಧನೂರಿನ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಉಪನ್ಯಾಸಕ ಡಾ.ಗಂಗಾಧರ ಎಲ್ ಅವರು ಜಯಂತಿ ಕಾರ್ಯಕ್ರಮ ಕುರಿತು ವಿಶೇಷ ಉಪನ್ಯಾಸ ನೀಡುವರು. ಕಾರ್ಯಕ್ರಮದಲ್ಲಿ ಸಂಗನಕಲ್ಲಿನ ಯೋಗೇಶ್ ಬಣಗಾರ ಅವರಿಂದ ವಚನ ಸಂಗೀತ ಇರಲಿದೆ.

ಮೆರವಣಿಗೆ :

ಜಯಂತಿ ಕಾರ್ಯಕ್ರಮದ ಅಂಗವಾಗಿ ಅಂದು ಬೆಳಿಗ್ಗೆ 9.30 ಗಂಟೆಗೆ ನಗರದ ಕೊರವರ ಸಮುದಾಯ ಭವನ ಆವರಣದಿಂದ ಮೆರವಣಿಗೆ ನಡೆಯಲಿದ್ದು, ಮೆರವಣಿಗೆಯು ಕೊರವರ ಬೀದಿ-ಸುಂಕ್ಲಮ್ಮ ದೇವಸ್ಥಾನ-ಕೌಲ್ ಬಜಾರ್ ಮುಖ್ಯರಸ್ತೆ-ವಾಲ್ಮೀಕಿ ಭವನ-ಡಾ.ಬಾಬು ಜಗಜೀವನರಾಂ ಭವನದ ಮೂಲಕ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದವರೆಗೆ ನಡೆಯಲಿದೆ.

ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News