×
Ad

ಬಳ್ಳಾರಿ | ಪಂಪಾಪತಿ ಹಂಪಮ್ಮದೇವಿ ಮಹಾರಥೋತ್ಸವ

Update: 2026-02-02 23:20 IST

ಬಳ್ಳಾರಿ : ಕಂಪ್ಲಿ-ಕೋಟೆಯ ತುಂಗಭದ್ರಾ ನದಿ ತೀರದಲ್ಲಿ ಪಂಪಾಪತಿ ಮತ್ತು ಹಂಪಮ್ಮದೇವಿ ಮಹಾರಥೋತ್ಸವವು ಸಂಭ್ರಮದಿಂದ ಜರುಗಿತು.

ಮಹಾರಥೋತ್ಸವದ ಅಂಗವಾಗಿ ಕಂಕಣಧಾರಣೆ, ರಥಕ್ಕೆ ಕಳಸಧಾರಣೆ ಹಾಗೂ ಶ್ರೀ ಪಂಪಾಪತಿ ಹಂಪಮ್ಮದೇವಿಯ ಕಲ್ಯಾಣ ಮಹೋತ್ಸವವು ವಿಜೃಂಭಣೆಯಿಂದ ಜರುಗಿದವು. ರಾತ್ರಿ ಆಕರ್ಷಕ ಹೂವಿನ ಪಲ್ಲಕ್ಕಿ ಉತ್ಸವ ನಡೆಯಿತು.

ಸಂಜೆ ರಥಕ್ಕೆ ಹೂಗಳು, ತಳಿರು ತೋರಣಗಳಿಂದ ಅಲಂಕರಿಸಿ ಮಹಾಮಂಗಳಾರತಿ ಮಾಡಲಾಯಿತು. ನಂತರ ಜಯಘೋಷಗಳೊಂದಿಗೆ ದೇವಸ್ಥಾನದ ಪದಾಧಿಕಾರಿಗಳು ಮಹಾರಥೋತ್ಸವಕ್ಕೆ ಚಾಲನೆ ನೀಡಿದರು. ಮಹಾರಥೋತ್ಸವದಲ್ಲಿ ವಿವಿಧ ಜಾನಪದ ಕಲಾತಂಡಗಳು, ಮಂಗಳವಾದ್ಯಗಳು ಭಾಗವಹಿಸಿದ್ದವು.

ರಥೋತ್ಸವದಲ್ಲಿ ದೇವಸ್ಥಾನ ಸಮಿತಿ ಪದಾಧಿಕಾರಿಗಳು, ಕೋಟೆ, ಕಂಪ್ಲಿ ಹಾಗೂ ಸುತ್ತ ಮುತ್ತಲ ಗ್ರಾಮಗಳ ಸಾವಿರಾರು ಭಕ್ತರು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News