ಬಳ್ಳಾರಿ: ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ದ್ವಿಚಕ್ರ ವಾಹನ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಬಂಧಿಸಿದ ಬಳ್ಳಾರಿ ನಗರ ಉಪವಿಭಾಗದ ಪೊಲೀಸರು, 14,80,000 ಮೌಲ್ಯದ 37  ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿದ್ದಾರೆ.

ಬಳ್ಳಾರಿಯ ರೂಪನಗುಡಿ ರಸ್ತೆಯ ಹರಿಶ್ಚಂದ್ರ ನಗರ ನಿವಾಸಿ ಕಾಳಿ ಪ್ರಸಾದ್ (40) ಬಂಧಿತ ಆರೋಪಿ.

ಬಳ್ಳಾರಿಯ ಗಾಂಧಿನಗರ, ಬ್ರೂಸ್‌ಪೇಟೆ, ತೋರಣಗಲ್ಲು, ಮುನಿರಾಬಾದ್, ಕಂಪ್ಲಿ ಹಾಗೂ ಗುಂತಕಲ್ಲು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನ ಪ್ರಕರಣಗಳು ದಾಖಲಾಗಿದ್ದವು. ಗಾಂಧಿನಗರ ಮತ್ತು ಬ್ರೂಸ್‌ಪೇಟೆ ಠಾಣಾ ಪೊಲೀಸರು ಪ್ರತ್ಯೇಕವಾಗಿ ತನಿಖೆ ಕೈಗೊಂಡಾಗ ಈ ಎಲ್ಲಾ ಕಳ್ಳತನಗಳಲ್ಲಿ ಆರೋಪಿ ಭಾಗಿಯಾಗಿರುವುದು ಪತ್ತೆಯಾಗಿದೆ.

ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ. ಪೆನ್ನೇಕರ್ ಹಾಗೂ ಹೆಚ್ಚುವರಿ ಎಸ್‌ಪಿ ಮಾರ್ಗದರ್ಶನದಲ್ಲಿ ಬಳ್ಳಾರಿ ನಗರ ಡಿವೈಎಸ್ಪಿ ಗೋವಿಂದ್ ರಾಜ್, ಪಿಐಗಳಾದ ಮಹಾಂತೇಶ್ ಟಿ, ರವಿಚಂದ್ರ ಡಿ.ಬಿ, ಪಿಎಸ್‌ಐಗಳಾದ ಶಹನಾಜ್, ಕೆ. ವಿರುಪಾಕ್ಷಪ್ಪ ಹಾಗೂ ಸಿಬ್ಬಂದಿಯನ್ನೊಳಗೊಂಡ ತಂಡ ಕಾರ್ಯಾಚರಣೆ ನಡೆಸಿ ಕಳ್ಳತನ ಮಾಡಿದ್ದ ದ್ವಿಚಕ್ರವಾಹನಗಳನ್ನು ಪತ್ತೆ ಹಚ್ಚಿದ್ದಾರೆ.  

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor