×
Ad

ಬಳ್ಳಾರಿ | ಐತಿಹಾಸಿಕ ತಾಣಗಳನ್ನು ಸಂರಕ್ಷಿಸಿ: ಪ್ರೊ.ಪರಮಶಿವಮೂರ್ತಿ

Update: 2025-08-16 21:25 IST

ಬಳ್ಳಾರಿ,ಆ.16 : ಪ್ರಾಗೈತಿಹಾಸಿಕ ಹಸ್ತಪ್ರತಿಗಳು, ನಾಣ್ಯಗಳು, ಸ್ಮಾರಕಗಳು, ತಾಳೆಗರಿಗಳು, ಕುರುಹುಗಳು, ಕಡತಗಳು ನಿರ್ವಹಣೆ ಕೊರತೆಯಿಂದ ನಶಿಸಿ ಹೋಗುತ್ತಿದ್ದು, ಅವುಗಳು ಸಂರಕ್ಷಿಸುವ ಕಾರ್ಯವಾಗಬೇಕಿದೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಡಿ.ವಿ.ಪರಮಶಿವಮೂರ್ತಿ ಅವರು ಹೇಳಿದರು.

ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಇತಿಹಾಸ ಮತ್ತು ಪುರಾತತ್ವ ಅಧ್ಯಯನ ವಿಭಾಗ ಮತ್ತು ಕರ್ನಾಟಕ ಇತಿಹಾಸ ಅಕಾಡೆಮಿ(ರಿ) ಜಂಟಿ ಸಹಯೋಗದಲ್ಲಿ ಆಯೋಜಿಸಿದ್ದ ‘ಐತಿಹಾಸಿಕ ಪರಂಪರೆ ಉಳಿಸಿ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಿಶ್ರೀಕೃ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ಮುನಿರಾಜು ಮಾತನಾಡಿ, ಐತಿಹಾಸಿಕ ಪರಂಪರೆಯನ್ನು ಉಳಿಸಲು ಉಪನ್ಯಾಸಕರುಗಳು ಹಾಗೂ ವಿದ್ಯಾರ್ಥಿಗಳ ಪಾತ್ರ ಮುಖ್ಯವಾಗಿದೆ. ಹಂಪಿಯ ವಿರೂಪಾಕ್ಷ ದೇವಾಲಯ ಸೇರಿದಂತೆ ಅನೇಕ ಸ್ಮಾರಕಗಳು ಐತಿಹಾಸಿಕವಾಗಿ ವಿಶಿಷ್ಟ ಸ್ಥಾನವನ್ನು ಹೊಂದಿವೆ. ಇತಿಹಾಸ ಸೃಷ್ಟಿಸಿರುವ ಶಿಲ್ಪಿಗಳು, ಕಲಾವಿದರ ಪರಿಚಯ ಇಂದಿನ ಪೀಳಿಗೆಗೆ ತಿಳಿಸುವ ಅಗತ್ಯವಿದೆ. ವಿವಿಯ ಕಲಾ ಮತ್ತು ಸಮಾಜ ವಿಜ್ಞಾನ ನಿಕಾಯಗಳ ಸಂಶೋಧನೆಗೆ ಉತ್ತೇಜನ ನೀಡಲಾಗುವುದು ಎಂದು ತಿಳಿಸಿದರು.

ತುಮಕೂರು ವಿಶ್ವವಿದ್ಯಾಲಯದ ಕುಲಸಚಿವ ಡಾ.ಎಂ.ಕೊಟ್ರೇಶ್, ವಿವಿಯ ಕುಲಸಚಿವ ಸಿ.ನಾಗರಾಜು ಅವರು ಮಾತನಾಡಿದರು. ಕರ್ನಾಟಕ ಇತಿಹಾಸ ಅಕಾಡೆಮಿ ಅಧ್ಯಕ್ಷ ಡಾ.ದೇವರಕೊಂಡಾರೆಡ್ಡಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕರ್ನಾಟಕ ಇತಿಹಾಸ ಅಕಾಡೆಮಿಯ ಪ್ರಧಾನ ಕಾರ್ಯದರ್ಶಿ ಕೆ.ಎಲ್.ರಾಜಶೇಖರ್ ಅಕಾಡೆಮಿಯ ಕಾರ್ಯವೈಖರಿ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಐತಿಹಾಸಿಕ ಪರಂಪರೆ ಉಳಿಸಿ ಎಂಬ ಭಿತ್ತಿಪತ್ರವನ್ನು ಗಣ್ಯರು ಅನಾವರಣಗೊಳಿಸಿದರು. ಇತಿಹಾಸ ಮತ್ತು ಪುರಾತತ್ವ ವಿಭಾಗದ ಮುಖ್ಯಸ್ಥರಾದ ಪ್ರೊ ತಿಪ್ಪೇಸ್ವಾಮಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅಕಾಡೆಮಿಯ ಜಿಲ್ಲಾಧ್ಯಕ್ಷರಾದ ಟಿ.ಹೆಚ್.ಎಂ.ಬಸವರಾಜು ಅತಿಥಿಗಳನ್ನು ಪರಿಚಯಿಸಿ ಸ್ವಾಗತಿಸಿದರು. ಕಾರ್ಯಕ್ರಮವನ್ನು ಕನ್ನಡ ವಿಭಾಗದ ಡಾ.ಶಿವಪ್ರಕಾಶ್ ನಿರೂಪಿಸಿದರು. ಸಹಾಯಕ ಪ್ರಾಧ್ಯಾಪಕ ಸಂತೋಷಕುಮಾರ ವಂದಿಸಿದರು. ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಬೋಧಕರು, ಸಂಶೋಧನಾ ವಿದ್ಯಾರ್ಥಿಗಳು, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News