×
Ad

ಬಳ್ಳಾರಿ | ವಿವಿಧೆಡೆ ದಾಳಿ : 6 ಬಾಲಕಾರ್ಮಿಕ ಮಕ್ಕಳ ರಕ್ಷಣೆ

Update: 2025-11-07 22:02 IST

ಬಳ್ಳಾರಿ : ಸಿರುಗುಪ್ಪ ಹಾಗೂ ಕಂಪ್ಲಿ ಪಟ್ಟಣದ ವಿವಿಧ ಸ್ಥಳಗಳಲ್ಲಿರುವ ಗ್ಯಾರೇಜ್, ಮೆಕ್ಯಾನಿಕ್ ಶಾಪ್, ಕಟ್ಟಡ ನಿರ್ಮಾಣ, ಬೇಕರಿ ಇತ್ಯಾದಿ ಉದ್ದಿಮೆಗಳ ಮೇಲೆ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರ ಟಾಸ್ಕ್ ಫೋರ್ಸ್ ಸಮಿತಿಯು ದಾಳಿ ನಡೆಸಿದ್ದು, 6 ಬಾಲ ಮತ್ತು ಕಿಶೋರ ಕಾರ್ಮಿಕ ಮಕ್ಕಳನ್ನು ರಕ್ಷಿಸಲಾಗಿದೆ.

ಮಕ್ಕಳ ಹೇಳಿಕೆಗಳನ್ನು ಸ್ಥಳದಲ್ಲಿಯೇ ಪಡೆದುಕೊಂಡು, ಪುನರ್ವಸತಿಗಾಗಿ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಎಲ್ಲ ಮಕ್ಕಳನ್ನೂ ಹಾಜರುಪಡಿಸಲಾಗಿದೆ. ಜೊತೆಗೆ ಉದ್ದಿಮೆಗಳ ಮಾಲೀಕರಿಗೆ ಕರಪತ್ರ ಹಾಗೂ ಪೋಸ್ಟರ್‌ಗಳನ್ನು ನೀಡಿ ಜಾಗೃತಿ ಮೂಡಿಸಲಾಗಿದೆ.ಜಿಲ್ಲಾಧಿಕಾರಿಯವರ ನಿರ್ದೇಶನದ ಮೇರೆಗೆ, ಜಿಲ್ಲಾ ಕಾನೂನು ಸೇವೆಗಳು ಮತ್ತು ತಾಲೂಕು ಟಾಸ್ಕ್ ಫೋರ್ಸ್ ಸಮಿತಿ ಅಧ್ಯಕ್ಷ, ತಹಶೀಲ್ದಾರ್‌ ನೇತೃತ್ವದಲ್ಲಿ ಬಾಲಕಾರ್ಮಿಕ / ಕಿಶೋರ ಕಾರ್ಮಿಕರ ಟಾಸ್ಕ್ ಫೋರ್ಸ್ ಸಮಿತಿ ಸಭೆ ನಡೆಸಿ ಈ ದಾಳಿ ಕೈಗೊಳ್ಳಲಾಗಿದೆ.

ಟಾಸ್ಕ್ ಫೋರ್ಸ್ ಸಮಿತಿಯಲ್ಲಿ ಕಾರ್ಮಿಕ ನಿರೀಕ್ಷಕ ತಿರುಮಲೇಶ್, ಶಿವಶಂಕರ್, ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಮೌನೇಶ್, ಗ್ರೇಡ್–2 ತಹಶೀಲ್ದಾರ ಬಸವರಾಜ್, ಶಿಕ್ಷಣ ಇಲಾಖೆಯ ಶಿಕ್ಷಣ ಸಂಯೋಜಕ ಬಸವರಾಜ್, ಪೋಲಿಸ್ ಸಬ್–ಇನ್ಸ್‌ಪೆಕ್ಟರ್ ಅವಿನಾಶ್ ಕಾಬ್ಳೆ, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲನ ಗೌಡ, ಮಕ್ಕಳ ಸಹಾಯವಾಣಿ ಸಿಬ್ಬಂದಿ ಚಂದ್ರಕಲಾ, ಕಿರಣ್ ಕುಮಾರ್, ರೀಚ್ ಸಂಸ್ಥೆಯ ಸಂಯೋಜಕಿ ಲಕ್ಷ್ಮೀ ದೇವಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News