×
Ad

ಬಳ್ಳಾರಿ | ಹಿರಿಯ ನಾಗರಿಕರಿಗೆ ಗೌರವ ನೀಡಬೇಕು : ನ್ಯಾ.ರಾಜೇಶ್ ಎನ್.ಹೊಸಮನೆ

Update: 2025-06-23 22:35 IST

ಬಳ್ಳಾರಿ : ಹಳೇ ಬೇರು, ಹೊಸ ಚಿಗುರು ಎಂಬಂತೆ ಹಿರಿಯರನ್ನು ಗೌರವಿಸಿ ವಿಧೇಯರಾಗಿರಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಬಳ್ಳಾರಿ, ಮಹಿಳಾ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸ್ವಯಂಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಗರದ ಬೆಳಗಲ್ ರಸ್ತೆಯ ಜಿ.ಚೆಂಗಾರೆಡ್ಡಿ ಸ್ಮಾರಕ ಮಾನಸಿಕ ವಿಶೇಷ ಚೇತನ ಮಕ್ಕಳ ವಸತಿಯುತ ವಿಶೇಷ ಶಾಲೆಯ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ‘ವಿಶ್ವ ಹಿರಿಯ ನಾಗರಿಕರ ನಿಂದನ ಜಾಗೃತಿ ದಿನ' ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ರಾಮಕೃಷ್ಣ, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಹೆಚ್.ಗೋವಿಂದಪ್ಪ, ಭಿಕ್ಷುಕರ ನಿರ್ಮೂಲನಾ ಕೇಂದ್ರದ ಅಧ್ಯಕ್ಷ ಚಿನ್ನಪಲ್ಲಯ್ಯ, ಹಿರಿಯ ನಾಗರಿಕರಾದ ಕೆ.ನಾರಾಯಣಪ್ಪ, ಸಂಸ್ಥೆಯ ಆಡಳಿತಾಧಿಕಾರಿ ಹೆಚ್.ಗುರುಮೂರ್ತಿ, ಸೋಮನಾಥ ಸೇರಿದಂತೆ ಹಿರಿಯ ನಾಗರಿಕರು, ವೃದ್ಧಾಶ್ರಮದ ಹಿರಿಯ ನಾಗರಿಕರು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News