×
Ad

ಬಳ್ಳಾರಿ | ಪೊಲೀಸ್ ಸಂಚಾರಿ ಜಾಗೃತಿ ವಾಹನಕ್ಕೆ ಎಸ್‌ಪಿ ಡಾ.ಶೋಭಾರಾಣಿ ವಿ.ಜೆ. ಚಾಲನೆ

Update: 2025-07-02 22:27 IST

ಬಳ್ಳಾರಿ : ಜಿಲ್ಲಾ ಪೊಲೀಸ್ ಮತ್ತು ಮಿನೆರಾ ಸ್ಟೀಲ್ ಆಂಡ್ ಪವರ್ ಪ್ರೈವೇಟ್ ಲಿಮಿಟೆಡ್ ಇವರ ಸಹಯೋಗದೊಂದಿಗೆ ಸಿಎಸ್‌ಆರ್ ಯೋಜನೆಯಡಿ ಜಿಲ್ಲೆಯಾದ್ಯಂತ ಜನಸಂದಣಿ ಇರುವ ಸ್ಥಳಗಳಲ್ಲಿ ಸಂಚರಿಸಿ ಅಪರಾಧಗಳ ಬಗ್ಗೆ ಸಾರ್ವಜನಿಕರಲ್ಲಿ ಸುರಕ್ಷತಾ ಕ್ರಮಗಳ ಕುರಿತು ಜಾಗೃತಿ ಮೂಡಿಸುವ ಸಂಚಾರಿ ಜಾಗೃತಿ ವಾಹನಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ ಅವರು ಜಿಲ್ಲಾ ಪೊಲೀಸ್ ಕಚೇರಿ ಆವರಣದಲ್ಲಿ ಸೋಮವಾರ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಅಪರಾಧಗಳ ನಿಯಂತ್ರಣ ಮತ್ತು ಮಹಿಳಾ ಹಾಗೂ ಮಕ್ಕಳ, ಹಿರಿಯ ನಾಗರಿಕರ ಸುರಕ್ಷತೆ, ರಸ್ತೆ ಸುರಕ್ಷತೆ, ಸ್ವತ್ತಿನ ಅಪರಾಧಗಳ ನಿಯಂತ್ರಣ, ಮಾದಕ ದ್ರವ್ಯ ಸೇವನೆ ದುಷ್ಪರಿಣಾಮ, ಸೈಬರ್ ವಂಚನೆ, ಜಾತಿ ನಿಂದನೆ ಸೇರಿದಂತೆ ಮುಂತಾದ ಅಪರಾಧಗಳ ಬಗ್ಗೆ ಸಾರ್ವಜನಿಕರಲ್ಲಿ ಸುರಕ್ಷತಾ ಕ್ರಮಗಳ ಕುರಿತು ಸಂಚಾರಿ ಜಾಗೃತಿ ವಾಹನವು ಜಾಗೃತಿ ಮೂಡಿಸಲಿದೆ ಎಂದರು.

ಇದೇ ವೇಳೆ ವಾಹನ ಸವಾರರ ಸುರಕ್ಷತೆಗಾಗಿ ಪೊಲೀಸ್ ಸಿಬ್ಬಂದಿಯವರಿಗೆ ಉಚಿತ ಹೆಲ್ಮೆಟ್ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ರವಿಕುಮಾರ್, ನವೀನ್ ಕುಮಾರ್, ಮಿನೆರಾ ಸ್ಟೀಲ್ಸ್ ಅಂಡ್ ಪವರ್ ಪ್ರೆöÊವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ಟಿ.ಹನುಮಂತರೆಡ್ಡಿ ಸೇರಿದಂತೆ ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News