×
Ad

ಬಳ್ಳಾರಿ | ಬಾಲ್ಯವಿವಾಹ ತಡೆಗೆ ವಿದ್ಯಾರ್ಥಿಗಳು ಕೈ ಜೋಡಿಸಬೇಕು : ಮಕ್ಕಳ ರಕ್ಷಣಾಧಿಕಾರಿ ಎಳೆನಾಗಪ್ಪ ಕರೆ

Update: 2025-08-11 18:39 IST

ಬಳ್ಳಾರಿ : ಬಾಲ್ಯವಿವಾಹದ ದುಷ್ಪರಿಣಾಮಗಳು ಮತ್ತು ಮಕ್ಕಳ ರಕ್ಷಣೆ, ಬಾಲ್ಯವಿವಾಹ ತಡೆ ಕಾನೂನುಗಳ ಬಗ್ಗೆ ವಿದ್ಯಾರ್ಥಿಗಳು ಅರಿತುಕೊಂಡು ಬಾಲ್ಯವಿವಾಹ ತಡೆಯುವಲ್ಲಿ ಇಲಾಖೆಗಳ ಜೊತೆ ಕೈ ಜೋಡಿಸಿಬೇಕು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎಳೆ ನಾಗಪ್ಪ ಹೇಳಿದರು.

ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ ಕೇಂದ್ರ, ಪೋಲಿಸ್ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಇವರ ಸಹಯೋಗದಲ್ಲಿ ನಗರದ ಅಂದ್ರಾಳ್ ಪ್ರದೇಶದ ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ “ಬಾಲ್ಯವಿವಾಹ, ಪೋಕ್ಸೋ ಕಾಯ್ದೆ ಮತ್ತು ಮೂಢ ನಂಬಿಕೆಗಳು ಹಾಗೂ ಮಕ್ಕಳ ಹಕ್ಕುಗಳ ರಕ್ಷಣೆ” ಕುರಿತು ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ನಿಮ್ಮ ಸುತ್ತ-ಮುತ್ತಲಿನ ಪ್ರದೇಶದಲ್ಲಿ ಬಾಲ್ಯವಿವಾಹ ನಡೆಯುತ್ತಿರುವುದು ಕಂಡುಬಂದರೆ ಮಕ್ಕಳ ಸಹಾಯವಾಣಿ ಸಂಖ್ಯೆ-1098 ಅಥವಾ ಪೋಲಿಸ್ ಸಹಾಯವಾಣಿ ಸಂಖ್ಯೆ-112 ಗೆ ಕರೆ ಮಾಡಿ ಮಾಹಿತಿ ನೀಡಬೇಕು ಎಂದು ತಿಳಿಸಿದರು.

ಸರ್ಕಾರಿ ಪ್ರೌಢಶಾಲೆಯ ಮುಖ್ಯಗುರುಗಳಾದ ರತ್ನಾದೇವಿ ಅವರು ಮಾತನಾಡಿ, ಬಾಲ್ಯವಿವಾಹ ಜಾಗೃತಿ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ತಿಳಿದುಕೊಂಡು ಬಾಲ್ಯವಿವಾಹ ತಡೆಗೆ ಮುಂದಾಗಬೇಕು. ತಮ್ಮ ಮನೆಯ ಸುತ್ತ-ಮುತ್ತಲಿನಲ್ಲಿ ಹಾಗೂ ತಮ್ಮ ಪೋಷಕರಿಗೆ ಈ ಕುರಿತು ಅರಿವು ಮೂಡಿಸಬೇಕು ಎಂದರು.

ಮಕ್ಕಳ ರಕ್ಷಣಾಧಿಕಾರಿ ಅಸಾಂಸ್ಥಿಕ ಸೇವೆಯ ಚನ್ನಬಸಪ್ಪ ಪಾಟೀಲ್ ಮಾತನಾಡಿದರು.

ಕಾರ್ಯಕ್ರಮಕ್ಕೂ ಮುನ್ನ ಸಿಆರ್‌ಪಿ ಆರ್.ವಿಜಯಕುಮಾರ್ ಅವರು ವಿದ್ಯಾರ್ಥಿಗಳಿಗೆ ಬಾಲ್ಯವಿವಾಹ ತಡೆ ಪ್ರತಿಜ್ಞಾವಿಧಿ ಭೋಧಿಸಿದರು.

ಈ ಸಂದರ್ಭದಲ್ಲಿ ಕಾನೂನು ಪರಿವೀಕ್ಷಣಾಧಿಕಾರಿ ಈಶ್ವರ ರಾವ್, ಪೊಲೀಸ್ ಇಲಾಖೆಯ ನವದುರ್ಗಿ ತಂಡದ ವಿದ್ಯಾಬಾರ್ಕಿ, ಅಂಗನವಾಡಿ ಮೇಲ್ವಿಚಾರಕಿ ನಂದಿನಿ, ಸರ್ಕಾರಿ ಪ್ರಾಥಮಿಕ ಶಾಲೆಯ ಗಾಯಿತ್ರಿ, ತಿಪ್ಪೇಸ್ವಾಮಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳಾದ ನಿಲೋಫಿಯಾ, ಚಂದ್ರಕಳಾ ಸೇರಿದಂತೆ ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಆಶಾ-ಅಂಗನವಾಡಿ ಕಾರ್ಯಕರ್ತೆಯರು, ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News