×
Ad

ಬಳ್ಳಾರಿ | ಸಮಾಜದಲ್ಲಿ ಬಾಲ್ಯವಿವಾಹ ಕುರಿತು ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯವಿದೆ: ಚನ್ನಬಸಪ್ಪ ಪಾಟೀಲ್

Update: 2025-08-05 21:42 IST

ಬಳ್ಳಾರಿ : ಜಿಲ್ಲಾ ವ್ಯಾಪ್ತಿಯಲ್ಲಿ ಹೆಚ್ಚು ಬಾಲ್ಯವಿವಾಹ ನಡೆಯುತ್ತಿರುವುದು ವಿಷಾಧಕರ ಸಂಗತಿಯಾಗಿದ್ದು, ಸಮಾಜದಲ್ಲಿ ಬಾಲ್ಯವಿವಾಹ ಕುರಿತು ಇನ್ನೂ ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಮಕ್ಕಳ ರಕ್ಷಣಾಧಿಕಾರಿ (ಅಸಾಂಸ್ಥಿಕ ಸೇವೆ) ಚನ್ನಬಸಪ್ಪ ಪಾಟೀಲ್ ಹೇಳಿದರು.

ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ ಕೇಂದ್ರ, ಪೋಲಿಸ್ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಇವರ ಸಹಯೋಗದಲ್ಲಿ ನಗರದ ಕಂಟೋನ್‌ಮೆಂಟ್ ಪ್ರದೇಶದ ಗಾಲೀಬ್ ಪ್ರೌಢಶಾಲೆ(ಅನುದಾನಿತ)ಯಲ್ಲಿ ಮಂಗಳವಾರ ಆಯೋಜಿಸಿದ್ದ “ಬಾಲ್ಯವಿವಾಹ, ಪೋಕ್ಸೋ ಕಾಯ್ದೆ ಮತ್ತು ಮೂಡ ನಂಬಿಕೆಗಳು ಹಾಗೂ ಮಕ್ಕಳ ಹಕ್ಕುಗಳ ರಕ್ಷಣೆ” ಕುರಿತು ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲಾ ವ್ಯಾಪ್ತಿಯಲ್ಲಿ ಬಾಲ್ಯವಿವಾಹಗಳಿಗೆ ಪ್ರೋತ್ಸಾಹ ನೀಡುತ್ತಿರುವ ಪೋಷಕರಿಗೆ ಇನ್ನೂ ಹೆಚ್ಚಿನ ಜಾಗೃತಿ ಮೂಡಿಸಿ, ಬಾಲ್ಯವಿವಾಹಗಳನ್ನು ನೆರವೇರಿಸುತ್ತಿರುವ ವ್ಯಕ್ತಿಗಳು, ಲಗ್ನ ಪತ್ರಿಕೆ ಮುದ್ರಣ ಮಾಡುವ ಪ್ರಿಟಿಂಗ್ ಪ್ರೆಸ್, ವಾದ್ಯವೃಂದದವರು, ಶಾಮಿಯಾನ ಸಪ್ಲೆಯರ್, ಪೋಟೋಗ್ರಾಫರ್-ವಿಡಿಯೋಗ್ರಾಫರ್ ಸೇರಿದಂತೆ ಭಾಗಿಯಾದ ಇನ್ನಿತರೆ ವ್ಯಕ್ತಿಗಳ ಮೇಲೆ ಕಾನೂನು ಕ್ರಮವಹಿಸಲಾಗುವುದು ಎಂದು ತಿಳಿಸಿದರು.

ಮಕ್ಕಳ ರಕ್ಷಣಾ ಘಟಕದ ನಿಲೋಫಿಯಾ ಅವರು ಮಾತನಾಡಿದರು.

ಮಕ್ಕಳ ಸಹಾಯವಾಣಿ ಸಿಬ್ಬಂದಿಯಾದ ಸುಶೀಲ, ಮಕ್ಕಳ ಸಹಾಯವಾಣಿ ಸಂಖ್ಯೆ-1098 ನ ಕಾರ್ಯವೈಖರಿ, ಸೇವೆಗಳು, ಮಕ್ಕಳ ರಕ್ಷಣೆ ಮತ್ತು ಪುನರ್ವಸತಿ ಕುರಿತು ಮಾಹಿತಿ ನೀಡಿದರು.

ಸಿಆರ್‌ಪಿ ಶಾಹನವಾಜ್, ಪೊಲೀಸ್ ಇಲಾಖೆಯ ನವದುರ್ಗಿ ತಂಡದ ಪವಿತ್ರ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯಗುರುಗಳಾದ ನಜೀರ್ ಸೇರಿದಂತೆ ಶಾಲೆಯ ಶಿಕ್ಷಕರು, ಮಕ್ಕಳ ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.  

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News