×
Ad

ಬಳ್ಳಾರಿ | ಕೆರೆಯಲ್ಲಿ ಈಜಲು ತೆರಳಿದ್ದ ಒಂದೇ ಕುಟುಂಬದ ಇಬ್ಬರು ನೀರುಪಾಲು

Update: 2026-06-06 19:24 IST

ಸಂಡೂರು: ಬಳ್ಳಾರಿಯ ಹುಲಕುಂಟೆ ಕೆರೆಯಲ್ಲಿ ಈಜಲು ತೆರಳಿದ್ದ ಒಂದೇ ಕುಟುಂಬದ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ.

ಮೃತರನ್ನು ಬುಡ್ಡೆನಹಳ್ಳಿ ಗ್ರಾಮದ ಪಾಂಡುರಂಗಪ್ಪ(56) ಮತ್ತು ಅವರ ಮೊಮ್ಮಗ ಪವನ್ ಕುಮಾರ್ (8) ಎಂದು ಗುರುತಿಸಲಾಗಿದೆ. ಇವರು ಬೊಮ್ಮಘಟ್ಟ ಗ್ರಾಮದ ನಿವಾಸಿಗಳಾಗಿದ್ದಾರೆ. 

ತೋಟದ ಕೆಲಸಕ್ಕಾಗಿ ತೆರಳಿದ್ದ ಅಜ್ಜ ಮತ್ತು ಮೊಮ್ಮಗ ಹುಲಕುಂಟೆ ಕೆರೆಗೆ ಈಜಲು ತೆರಳಿದ್ದರು. ಈ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಘಟನೆ ಬಗ್ಗೆ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ಕುಟುಂಬಸ್ಥರು ಸ್ಥಳಕ್ಕೆ ತೆರಳಿ ಮೃತದೇಹಗಳನ್ನು ಕೆರೆಯಿಂದ ಹೊರ ತೆಗೆದಿದ್ದಾರೆ.  

ಈ ಕುರಿತು ಚೋರ್ನೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News