×
Ad

ಬಳ್ಳಾರಿ| ಪ್ರತಿಭಾ ಕಾರಂಜಿಯಲ್ಲಿ ವಿಜಯನಗರ ಶಾಲೆಯ ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆ

Update: 2026-01-20 19:34 IST

ಕಂಪ್ಲಿ: ಬಳ್ಳಾರಿಯ ಸಂತ ಜಾನರ ಪ್ರೌಢಶಾಲೆಯಲ್ಲಿ ಜನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ವಿಜಯನಗರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರು ಅತ್ಯುತ್ತಮ ಸಾಧನೆ ಮಾಡಿದ್ದಾರೆ.   

ಗಝಲ್ ವಿಭಾಗದಲ್ಲಿ ಬಿಬಿ ಖತೀಜ, ಚರ್ಚಾ ಸ್ಪರ್ಧೆ ವಿಭಾಗದಲ್ಲಿ ಕೆ. ಮೋಕ್ಷಿತ ಹಾಗೂ ಕವ್ವಾಲಿ ವಿಭಾಗದಲ್ಲಿ ಖೈರುನ್ನಿಸ, ಸಬಿಯಾ ಬೇಗಂ, ಬಿಬಿ ಖತೀಜಾ, ಬಿಬಿ ಹಾಜರ, ಸಾನಿ ನಿಶಾ, ಮುಬೀನಾ ಅವರು ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರು, ಆಡಳಿತ ಮಂಡಳಿಯ ಸದಸ್ಯರು, ಮುಖ್ಯ ಶಿಕ್ಷಕರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಸೇರಿದಂತೆ ಇತರರು ಹರ್ಷ ವ್ಯಕ್ತಪಡಿಸಿದ್ದಾರೆ.  

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News