ಬಳ್ಳಾರಿ: ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ 109ನೇ ಜಯಂತಿಯನ್ನು ಗುರುವಾರ ಆಚರಿಸಲಾಯಿತು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಇಂದಿರಾ ಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಅರ್ಪಿಸಿದರು.

ಬಳಿಕ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹುಮಯೂನ್ ಖಾನ್, ದೇಶದ ಅಭಿವೃದ್ಧಿ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತದ ಗೌರವ ಹೆಚ್ಚಿಸುವಲ್ಲಿ ಇಂದಿರಾ ಗಾಂಧಿ ಅವರ ಪಾತ್ರ ಮಹತ್ವದ್ದಾಗಿದೆ. ಅವರ ದಿಟ್ಟ ಆಡಳಿತ ವೈಖರಿ ಸ್ಮರಣೀಯವಾಗಿದೆ. 1971ರಲ್ಲಿ ಬಾಂಗ್ಲಾದೇಶ ವಿಮೋಚನೆಯ ಸಂದರ್ಭದಲ್ಲಿ ಅವರು ತೋರಿದ ಧೈರ್ಯ ಹಾಗೂ ರಾಜತಾಂತ್ರಿಕ ನಾಯಕತ್ವ ಜಾಗತಿಕ ಇತಿಹಾಸದಲ್ಲಿ ದಾಖಲಾಗಿದೆ ಎಂದು ಸ್ಮರಿಸಿದರು.

ಕಾರ್ಯಕ್ರಮದಲ್ಲಿ ಡಿಸಿಸಿ ಉಪಾಧ್ಯಕ್ಷ ಕೆ. ಶ್ರೀನಿವಾಸುಲು, ಕಾರ್ಯಕಾರಿಣಿ ಸಮಿತಿ ಸದಸ್ಯ ವೆಂಕಟಲಕ್ಷ್ಮಿ ನಾರಾಯಣ, ಮುಂಚೂಣಿ ಘಟಕಗಳ ಅಧ್ಯಕ್ಷರಾದ ಎಂ.ಎಸ್. ಮಂಜುಳ, ಎರಕುಲ ಸ್ವಾಮಿ, ಕನೇಕಲ್ ಮಾಬುಸಾಬ್, ಅಖಿಲ್ ಅಹಮ್ಮದ್, ಅತ್ತವುಲ್ಲ, ನಗರ ಪ್ರಚಾರ ಸಮಿತಿ ಅಧ್ಯಕ್ಷ ಈರನಗೌಡ, ಮುಖಂಡರಾದ ಸಮೀರ್, ಸಂಗನಕಲ್ ವಿಜಯ್ ಕುಮಾರ್, ಪರ್ವಿನ್ ಭಾನು, ಮಲ್ಲಮ್ಮ, ಬಿ.ಎ. ಮಲ್ಲೇಶ್ವರಿ, ಆಫ್ರಿನ್, ಲಿಂಗರಾಜು, ಎಂ.ಪಿ. ಕಮಲ, ರಂಗಸ್ವಾಮಿ ಹಾಗೂ ಸಿದ್ದರಾಮ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಪೀರಾಸಾಬ್/ವಾರ್ತಾಭಾರತಿ

contributor

ಬೂದುಗುಪ್ಪ ಪೀರಾಸಾಬ್ ಅವರು ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಇವರು, ವೆಬ್ ಪತ್ರಿಕೋದ್ಯಮದ ಜೊತೆಗೆ ಸಾಮಾಜಿಕ ಹಾಗೂ ರಾಜಕೀಯ ವಿಷಯಗಳ ವರದಿಗಾರಿಕೆಯಲ್ಲಿ ವಿಶೇಷ ಆಸಕ್ತಿ ಹೊಂದಿದ್ದಾರೆ. ಪ್ರಸ್ತುತ ವಾರ್ತಾಭಾರತಿಯಲ್ಲಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ