×
Ad

ಕಂಪ್ಲಿ | ಮಿಷನ್ ಪ್ರಕೃತಿ ಅಭಿಯಾನ: ಎಮ್ಮಿಗನೂರು ಶತಮಾನ ಶಾಲೆಗೆ ರಾಜ್ಯ ಮಟ್ಟದ ಪ್ರಶಸ್ತಿ

Update: 2026-02-27 23:24 IST

ಕಂಪ್ಲಿ : ತಾಲೂಕಿನ ಎಮ್ಮಿಗನೂರು ಗ್ರಾಮದ ಸರ್ಕಾರಿ ಶತಮಾನ ಶಾಲೆಗೆ ರಾಜ್ಯ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ “ಮಿಷನ್ ಪ್ರಕೃತಿ” ಅಭಿಯಾನದಲ್ಲಿ ಕೈಗೊಂಡ ಚಟುವಟಿಕೆಗಳನ್ನು ಪರಿಗಣಿಸಿ ಪ್ರಶಸ್ತಿ ಲಭಿಸಿದೆ.

ಬೆಂಗಳೂರಿನ ವಿಕಾಸ ಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಶಸ್ತಿ ಫಲಕ ನೀಡಿ ಶಾಲೆಯನ್ನು ಗೌರವಿಸಿದರು.

ಶಾಲೆಯ ಮುಖ್ಯಶಿಕ್ಷಕ ಬಿ.ಎಸ್. ಸದ್ಯೋಜಾತಪ್ಪ ಮಾತನಾಡಿ, ಎರಡು ತಿಂಗಳುಗಳ ಕಾಲ ನಡೆದ ಮಿಷನ್ ಪ್ರಕೃತಿ ಅಭಿಯಾನದಲ್ಲಿ ಇಕೋ ಕ್ಲಬ್ ಮೂಲಕ ಪರಿಸರ ಸಂರಕ್ಷಣೆಗೆ ಸಂಬಂಧಿಸಿದ ಹಲವಾರು ಚಟುವಟಿಕೆಗಳನ್ನು ಹಮ್ಮಿಕೊಂಡು ಯಶಸ್ವಿಗೊಳಿಸಲಾಗಿದೆ ಎಂದರು. ವಿದ್ಯಾರ್ಥಿಗಳಿಗೆ ಸಮರ್ಪಕ ಮಾರ್ಗದರ್ಶನ ನೀಡಿದ ಶಿಕ್ಷಕಿ ಶ್ರುತಿ, ಸಿಬ್ಬಂದಿ ಹಾಗೂ ಎಸ್‌ಡಿಎಂಸಿ ಸದಸ್ಯರಿಗೆ ಅವರು ಧನ್ಯವಾದ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಬಳ್ಳಾರಿ ಡಯಟ್‌ನ ರಂಗಾರೆಡ್ಡಿ, ವಿಜ್ಞಾನ ಶಿಕ್ಷಕಿ ಶ್ರುತಿ, ಶಿಕ್ಷಕ ವೆಂಕಟೇಶ್, ವಿದ್ಯಾರ್ಥಿಗಳಾದ ರೆಹಮಾನ್ ಬಿ., ಮೇಘನಾ, ಅನೀಫ್, ಕೆಂಚಮಾಳಪ್ಪ ಸೇರಿದಂತೆ ಶಾಲೆಯ ಶಿಕ್ಷಕರು ಮತ್ತು ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News