ಸಂವಿಧಾನದಿಂದ ಪ್ರತಿಯೊಬ್ಬರಿಗೂ ಸಮಾನ ಅವಕಾಶ: ಪ್ರೊ. ಎಚ್. ತಿಪ್ಪೇಸ್ವಾಮಿ
ಸಂಡೂರು: ಸಂವಿಧಾನ ನೀಡಿರುವ ಸಮಾನ ಅವಕಾಶ ಹಾಗೂ ಹಕ್ಕುಗಳಿಂದಾಗಿ ಪ್ರತಿಯೊಬ್ಬ ನಾಗರಿಕನಿಗೂ ಸ್ವತಂತ್ರವಾಗಿ ಬದುಕಲು, ಶಿಕ್ಷಣ ಪಡೆಯಲು ಹಾಗೂ ಉನ್ನತ ಸ್ಥಾನಕ್ಕೇರಲು ಸಾಧ್ಯವಾಗಿದೆ ಎಂದು ನಂದಿಹಳ್ಳಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಪ್ರೊ.ಎಚ್.ತಿಪ್ಪೇಸ್ವಾಮಿ ಹೇಳಿದರು.
ತಾಲೂಕಿನ ನಂದಿಹಳ್ಳಿ ಸ್ನಾತಕೋತ್ತರ ಕೇಂದ್ರದಲ್ಲಿ ಗುರುವಾರ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಸಂವಿಧಾನದ ಆಶಯಗಳನ್ನು ಅರಿತು, ಜಾತಿ, ಧರ್ಮ, ಭಾಷೆ ಹಾಗೂ ಪ್ರಾದೇಶಿಕ ಭೇದಭಾವಗಳನ್ನು ಮೀರಿ ಸಹೋದರತೆ ಮತ್ತು ರಾಷ್ಟ್ರೀಯ ಏಕತೆಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಈ ವೇಳೆ ಇತಿಹಾಸ ವಿಭಾಗದ ಅಧ್ಯಾಪಕ ಡಾ. ಟಿ.ಎಸ್. ನರಸಿಂಹಮೂರ್ತಿ, ನಿವೃತ್ತ ಅಧ್ಯಾಪಕ ಪ್ರೊ. ಜಿ.ಕೆ. ಗೋಪಾಲಕೃಷ್ಣ, ಸಹಾಯಕ ಕ್ರೀಡಾ ನಿರ್ದೇಶಕ ಶಿವರಾಮಪ್ಪ ರಾಜ ಪ್ರಾಸ್ತಾವಿಕವಾಗಿ ಮಾತನಾಡಿದರು. ಖನಿಜ ಸಂಸ್ಕರಣ ವಿಭಾಗದ ಮುಖ್ಯಸ್ಥ ಡಾ. ಪಿ. ಶರತ್ ಕುಮಾರ್, ಅಧ್ಯಾಪಕರಾದ ಡಾ. ಸಿದ್ದಪ್ಪ, ಡಾ.ಜೆ. ನಾಗರಾಜ, ಲಕ್ಷ್ಮಣ್ ತೊಳಿ, ಡಾ.ವಿನಯ್ ಕುಮಾರ್, ಡಾ. ಹೊನ್ನೂರಪ್ಪ, ಕಿರಣ್ ಕುಮಾರ್, ಮಲ್ಲೇಶಿ ಉಪಸ್ಥಿತರಿದ್ದರು.