×
Ad

ಗುಡುಗು-ಸಿಡಿಲಿನಿಂದಾಗುವ ಅನಾಹುತ ತಪ್ಪಿಸಲು ಮುನ್ನೆಚ್ಚರಿಕೆ ಸೂಚನೆ ಪಾಲಿಸಿ : ಡಿಹೆಚ್‌ಓ ಡಾ.ಯಲ್ಲಾ ರಮೇಶ್ ಬಾಬು

Update: 2025-05-14 19:42 IST

ಬಳ್ಳಾರಿ : ಮಳೆಗಾಲದಲ್ಲಿ ಕಂಡುಬರುವ ಗುಡುಗು-ಸಿಡಿಲಿನಿಂದಾಗುವ ಅಪಾಯಗಳನ್ನು ತಪ್ಪಿಸಲು ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ತಿಳಿಸಿದ್ದಾರೆ.

ಮೇ ತಿಂಗಳಿನಲ್ಲಿ ಕಂಡುಬರುವ ಮಳೆಗಾಲದ ಆರಂಭದ ಹಂತದಲ್ಲಿ ತೀವ್ರತರದ ಗುಡುಗು-ಸಿಡಿಲು ಕಂಡುಬರುವುದು ಸಾಮಾನ್ಯವಾಗಿದ್ದು, ಜೊತೆಗೆ ಬಿರುಸಾಗಿ ಗಾಳಿ ಸಹಿತ ಮಳೆ ಕಂಡುಬರುವುದು ವಾಡಿಕೆಯಾಗಿದೆ. ಈ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಗುಡುಗು ಸಿಡಿಲು ಸಹಿತ ಮಳೆ ಕಂಡುಬರುತ್ತಿದ್ದು, ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು ಎಂದು ಅವರು ತಿಳಿಸಿದ್ದಾರೆ.

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಹೊರಡಿಸುವ ಮಾರ್ಗಸೂಚನೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆರೋಗ್ಯದ ದೃಷ್ಟಿಯಿಂದ ನೀಡುವ ಸಲಹೆಗಳನ್ನು ಅನುಸರಿಸಬೇಕು ಎಂದು ಹೇಳಿದ್ದಾರೆ.

ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಸಿಡಿಲು ಬಾಧಿತ ವ್ಯಕ್ತಿಗಳು ಆಗಮಿಸಿದಾಗ ತಕ್ಷಣ ಚಿಕಿತ್ಸೆ ಕ್ರಮ ಕೈಗೊಳ್ಳುವ ಕುರಿತು ವೈದ್ಯಾಧಿಕಾರಿಗಳಿಗೆ ಮಾಹಿತಿ ನೀಡಲಾಗಿದ್ದು, ಅಗತ್ಯ ಔಷಧಿ ದಾಸ್ತಾನು ಸಹ ಇಟ್ಟುಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News