ನ.15, 16ರಂದು ರಾಜ್ಯಪಾಲೆ ಸುಧಾ ಯಾದವ್ ಬಳ್ಳಾರಿ ಪ್ರವಾಸ
ಬಳ್ಳಾರಿ: ರಾಜ್ಯಪಾಲೆ ಡಾ. ಸುಧಾ ಯಾದವ್ ಅವರು ನ.15 ಮತ್ತು 16ರಂದು ಬಳ್ಳಾರಿ ಜಿಲ್ಲೆಗೆ ಪ್ರವಾಸ ಕೈಗೊಳ್ಳಲಿದ್ದಾರೆ.
ನ.15ರಂದು ಸಂಜೆ 6.45ಕ್ಕೆ ಬಳ್ಳಾರಿಗೆ ಆಗಮಿಸಲಿರುವ ಅವರು, ರಾತ್ರಿ 7.30ಕ್ಕೆ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ, ವಿಶ್ವವಿದ್ಯಾಲಯದ ಸಿಬ್ಬಂದಿಯೊಂದಿಗೆ ಸಂವಾದ ನಡೆಸಲಿದ್ದಾರೆ. ಬಳಿಕ ಪ್ರವಾಸಿ ಮಂದಿರದಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ನ.16ರಂದು ಬೆಳಿಗ್ಗೆ 10.10ಕ್ಕೆ ಬಳ್ಳಾರಿ ನಗರದ ಕನಕ ದುರ್ಗಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆಯಲಿದ್ದಾರೆ.
ನಂತರ ಬೆಳಿಗ್ಗೆ 11 ಗಂಟೆಗೆ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯಕ್ಕೆ ಆಗಮಿಸಿ, ಡಿಜಿಟಲ್ ಮತ್ತು ಎಲ್ಎಂಎಸ್ ತರಗತಿ ಕೊಠಡಿಗಳನ್ನು ಉದ್ಘಾಟಿಸಲಿದ್ದಾರೆ. ಇದೇ ವೇಳೆ ಸೋಲಾರ್ ಗ್ರಿಡ್ ಅಳವಡಿಕೆಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ.
ಬಳಿಕ ಬೆಳಿಗ್ಗೆ 11.30ಕ್ಕೆ ವಿಶ್ವವಿದ್ಯಾಲಯದ ಬಯಲು ರಂಗಮಂದಿರದಲ್ಲಿ ನಡೆಯಲಿರುವ 14ನೇ ವಾರ್ಷಿಕ ಘಟಿಕೋತ್ಸವದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 1.30ಕ್ಕೆ ಘಟಿಕೋತ್ಸವ ಕಾರ್ಯಕ್ರಮದ ಬಳಿಕ ಬಳ್ಳಾರಿಯಿಂದ ತುಮಕೂರಿಗೆ ಪ್ರಯಾಣ ಬೆಳೆಸಲಿದ್ದಾರೆ.