×
Ad

ಶಾಸಕ ಭರತ್ ರೆಡ್ಡಿ ಬಂಧಿಸಲು ಗೋವಿಂದ ಕಾರಜೋಳ ಒತ್ತಾಯ

ಕಾಂಗ್ರೆಸ್ ಸರಕಾರದ ವಿರುದ್ಧ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆ

Update: 2026-01-17 18:13 IST

ಗೋವಿಂದ ಕಾರಜೋಳ

ಬಳ್ಳಾರಿ: ಬಿಜೆಪಿ ವತಿಯಿಂದ ಬಳ್ಳಾರಿಯಲ್ಲಿ ಇಂದು ಕಾಂಗ್ರೆಸ್ ಸರಕಾರದ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಸಂಸದ ಗೋವಿಂದ ಕಾರಜೋಳ ಅವರು ಮಾತನಾಡಿ, ಗುಂಡು ಹಾರಿಸಿದವರು ಸುಪಾರಿ ಕಿಲ್ಲರ್ ಗಳು. ಅವರು ಸರಕಾರಿ ಗನ್‍ಮ್ಯಾನ್‍ಗಳಲ್ಲ ಎಂದು ತಿಳಿಸಿದರು.

ಸುಪಾರಿ ಕಿಲ್ಲರ್ ಗಳನ್ನು ಕರೆದುಕೊಂಡು ಬಂದು ಭರತ್ ರೆಡ್ಡಿ ದೊಡ್ಡ ಅಪರಾಧ ಮಾಡಿದ್ದಾರೆ. ಸಿದ್ದರಾಮಯ್ಯನವರೇ ನಿಮಗೆ ನೈತಿಕತೆ ಇದ್ದರೆ ಮೊದಲು ಭರತ್ ರೆಡ್ಡಿಯವರನ್ನು ಬಂಧಿಸಿ. ನಂತರ ತನಿಖೆ ಮಾಡಿ. ಇಲ್ಲವೇ ಸಿಬಿಐಗೆ ತನಿಖೆ ಒಪ್ಪಿಸಿ ಎಂದು ಒತ್ತಾಯಿಸಿದರು.

ಅಧಿಕಾರ ಶಾಶ್ವತವಲ್ಲ. ಯಾವ ರೀತಿ ಅಧಿಕಾರ ಮಾಡಿದ್ದೀರಿ ಎಂಬುದಷ್ಟೇ ಶಾಶ್ವತ ಎಂದು ಕಿವಿಮಾತು ಹೇಳಿದರು.

ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಬಸವರಾಜ ಬೊಮ್ಮಾಯಿ, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ, ಮಾಜಿ ಸಚಿವ ಬಿ. ಶ್ರೀರಾಮುಲು, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ವಿ. ಸುನೀಲ್ ಕುಮಾರ್, ಪಿ. ರಾಜೀವ್, ಶಾಸಕ ಜಿ. ಜನಾರ್ಧನ ರೆಡ್ಡಿ, ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಮೋಕಾ, ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಸಚಿವರು, ರಾಜ್ಯ ಪದಾಧಿಕಾರಿಗಳು, ಜಿಲ್ಲಾಧ್ಯಕ್ಷರು, ಜಿಲ್ಲಾ ಪದಾಧಿಕಾರಿಗಳು, ಮಹಾನಗರ ಪಾಲಿಕೆ ಸದಸ್ಯರು ಮತ್ತು ಪಕ್ಷದ ಮುಖಂಡರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News