×
Ad

ನ.8 ರಂದು ಬಳ್ಳಾರಿ ಘಟಕದ ಕೃಷಿ ಸಮಾಜದ ನೂತನ ಕಟ್ಟಡ ಉದ್ಘಾಟನಾ ಸಮಾರಂಭ

Update: 2025-11-07 21:54 IST

ಬಳ್ಳಾರಿ : ಜಿಲ್ಲಾಡಳಿತ, ಕರ್ನಾಟಕ ಪ್ರದೇಶ ಕೃಷಿಕ ಸಮಾಜ ಬೆಂಗಳೂರು, ಕೃಷಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಬಳ್ಳಾರಿ ಘಟಕದ ಕೃಷಿ ಸಮಾಜದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭವು ನ.8 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಹಳೇ ತಾಲ್ಲೂಕು ಕಚೇರಿ ಆವರಣದಲ್ಲಿ ನಡೆಯಲಿದೆ.

ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಕಟ್ಟಡದ ಉದ್ಘಾಟನೆ ನೆರವೇರಿಸುವರು. ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಬಿ.ಜೆಡ್.Jಮೀರ್ ಅಹ್ಮದ್ ಖಾನ್ ಅವರು ಘನ ಉಪಸ್ಥಿತರಿರುವರು.

ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.

ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಬಿ.ನಾಗೇಂದ್ರ, ಜೆ.ಎನ್.ಗಣೇಶ್, ಬಿ.ಎಂ.ನಾಗರಾಜ, ಈ.ಅನ್ನಪೂರ್ಣ, ವಿಧಾನಪರಿಷತ್ ಶಾಸಕರಾದ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಶೀಲ್ ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತದ ಉಪಾಧ್ಯಕ್ಷ ಹೆಚ್.ಲಕ್ಷ್ಮಣ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ಆಡಳಿತ ಅಧ್ಯಕ್ಷ ಮಂಜುನಾಥ್ ಗೌಡ ಎಸ್.ಆರ್., ಬಳ್ಳಾರಿ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಗಾದೆಪ್ಪ, ಕೃಷಿ ಸಮಾಜದ ಉಪಾಧ್ಯಕ್ಷ ಎಸ್.ಕೆ ವಿಶಾಲಾಕ್ಷಿ ಕುಮಾರಸ್ವಾಮಿ, ಕೃಷಿಕ ಸಮಾಜದ ರಾಜ್ಯ ಪ್ರತಿನಿಧಿ ಸುರೇಶ್ ನಂದಿ.ಪಿ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಕೃಷಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಎಸ್ ಸೆಲ್ವಕುಮಾರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ತ್ರಿಲೋಕಚಂದ್ರ ಕೆ.ವಿ., ಕೃಷಿ ಇಲಾಖೆಯ ಕೃಷಿ ಆಯುಕ್ತ ಯಲಗೌಡ ಶಿವನಗೌಡ ಪಾಟೀಲ್, ಜಲಾನಯನ ಅಭಿವೃದ್ಧಿ ಇಲಾಖೆಯ ಆಯುಕ್ತ ಉಪೇಂದ್ರ ಪ್ರತಾಪ್ ಸಿಂಗ್, ಕೃಷಿ ಇಲಾಖೆಯ ಕೃಷಿ ನಿರ್ದೇಶಕ ಡಾ.ಜಿ.ಟಿ ಪುತ್ರ, ಜಲಾನಯನ ಅಭಿವೃದ್ಧಿ ಇಲಾಖೆಯ ನಿರ್ದೇಶಕ ಮಹಮ್ಮದ್ ಫರ್ವೇಜ್ ಬಂಟನಾಳ್, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮುಹಮ್ಮದ್ ಹಾರಿಸ್ ಸುಮೇರ್, ಜಂಟಿ ಕೃಷಿ ನಿರ್ದೇಶಕ ಸೋಮಸುಂದರ ಕೆ.ಎಂ., ಉಪ ಕೃಷಿ ನಿರ್ದೇಶಕ ಮಂಜುನಾಥ್ ಎಸ್.ಎನ್ ಸೇರಿದಂತೆ ರಾಜ್ಯದ ನಿರ್ದೇಶಕರು, ಎಲ್ಲಾ ಜಿಲ್ಲಾ ಪ್ರತಿನಿಧಿಗಳು ಮತ್ತು ನಿರ್ದೇಶಕರು, ತಾಲ್ಲೂಕು ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಮತ್ತು ನಿರ್ದೇಶಕರು, ಜಿಲ್ಲಾ ಮತ್ತು ತಾಲ್ಲೂಕು ಖಜಾಂಚಿ ಮತ್ತು ಕಾರ್ಯದರ್ಶಿಗಳು, ಕೃಷಿ ಸಮಾಜದವರು, ಜಿಲ್ಲೆಯ ಎಲ್ಲಾ ಜನ ಪ್ರತಿನಿಧಿಗಳು, ಎಲ್ಲಾ ರೈತ ಮತ್ತು ಸಂಘ-ಸಂಸ್ಥೆಗಳು, ಪ್ರತಿಪರ ರೈತರು ಮತ್ತು ರೈತ ಮಹಿಳೆಯರು, ಸಾರ್ವಜನಿಕರು ಹಾಗೂ ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News